ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Twitter
Facebook
LinkedIn
WhatsApp
ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ಆಡಿಸುವ, ಆಯೋಜಿಸುವ ಪ್ರಸ್ತುತತೆಯನ್ನು ಪ್ರಶ್ನಿಸಿದ್ದಾರೆ.
ಹೌದು.. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಸ್ವಾಮೀಜಿಗಳು, ಕ್ರೀಡಾಳುಗಳಲ್ಲಿ ನಿಜವಾದ ಕ್ರೀಡಾಸ್ಫೂರ್ತಿ ಇಲ್ಲದಿದ್ದರೆ, ಪಂದ್ಯಗಳನ್ನು ಆಡುವುದರಲ್ಲಿ ಅರ್ಥವಿಲ್ಲ. ಮೈದಾನದಲ್ಲಿ ಆಟಗಾರರು ಪರಸ್ಪರ ಬೈದಾಡುತ್ತಾರೆ, ಕೈ-ಕೈ ಮಿಲಾಯಿಸುತ್ತಾರೆ, ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ದೊಂಬಿ ಮತ್ತು ಗಲಾಟೆಗಳಿಗೆ ಕಾರಣವಾಗುತ್ತದೆ. ಆಟವನ್ನು ಒಂದು ಯುದ್ಧದಂತೆ ಪರಿಗಣಿಸಲಾಗುತ್ತಿದೆ. ಪಾಕಿಸ್ತಾನದ ಒಬ್ಬ ಉದ್ಯಮಿ, ಈ ಬಾರಿಯ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ಭಾರತ ತಂಡವನ್ನು ಸೋಲಿಸಿದರೆ, ಅಲ್ಲಿನ ಕ್ರಿಕೆಟ್ ಮಂಡಳಿಗೆ ಬ್ಲ್ಯಾಂಕ್ ಚೆಕ್ ಕೊಡುವುದಾಗಿ ಹೇಳಿರುವುದು ಎರಡು ದೇಶಗಳ ಮಧ್ಯೆ ಎಂಥ ವೈರತ್ವವಿದೆ ಎನ್ನುವುದನ್ನು ಬಿಂಬಿಸುತ್ತದೆ, ಆ ಉದ್ಯಮಿಯ ಮಾತು ಕೇಳಿದರೆ ಇದೇನು ಕ್ರಿಕೆಟ್ ಪಂದ್ಯವೋ ಇಲ್ಲ ಯುದ್ಧವೋ ಎನ್ನುವ ಸಂಶಯ ಮೂಡುತ್ತದೆ ಎಂದು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆದರೆ ಅನರ್ಥಗಳೇ ಹೆಚ್ಚು ಸಂಭವಿಸುವುದರಿಂದ ಅವುಗಳನ್ನು ಆಯೋಜಿಸದಿರುವುದೇ ಒಳಿತು ಎಂದು ಸ್ವಾಮೀಜಿ ಹೇಳಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯನವರು ಉಡುಪಿಯ ಕೃಷ್ಣಮಠಕ್ಕೆ ಭೇಟಿ ನೀಡದಿರುವುದನ್ನು ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರ ಮುಂದೆ ಪ್ರಸ್ತಾಪಿಸಲಾಯಿತು. ಆದರೆ, ಸ್ವಾಮೀಜಿ ಅವರು ಅದನ್ನು ತಪ್ಪು ಅನ್ನುವ ರೀತಿಯಲ್ಲಿ ಮಾತಾಡಲಿಲ್ಲ. ಸಿದ್ದರಾಮಯ್ಯನವರು ಮಠಕ್ಕೆ ಭೇಟಿ ನೀಡಿಲ್ಲ ಅಂದಾಕ್ಷಣ ಅವರನ್ನು ಮಠದ ವಿರೋಧಿ ಅಂತ ಹೇಳುವುದು ಸರಿಯಲ್ಲ ಅಂತ ಶ್ರೀಗಳು ಹೇಳಿದರು. ಅವರು ಇದುವರೆಗೆ ಬಾರದೇ ಹೋಗಿದ್ದು ತಪ್ಪು ಅಂತ ಹೇಳಲಾಗದು, ಮುಂದೆ ಅವರು ಬರಬಹುದು ಎಂದು ಸ್ವಾಮೀಜಿ ಹೇಳಿದರು. ಮಠಕ್ಕೆ ಎಲ್ಲರೂ ಭೇಟಿ ನೀಡಬೇಕು ಎಂಬ ನಿಯಮವೇನೂ ಇಲ್ಲ ಎಂದು ಅವರು ಹೇಳಿದರು.
ಅಲ್ಲದೆ, ಕೊವಿಡ್ ಪಿಡುಗು ಮತ್ತು ಮೂರನೇ ಅಲೆಯ ಭೀತಿ ಇನ್ನೂ ದೂರವಾಗಿರದ ಕಾರಣ ಉಡುಪಿ ಮಠದಲ್ಲಿ ಜನ ಸಂಪರ್ಕ ಸಭೆಗಳನ್ನು ಮಾಡುತ್ತಿಲ್ಲ ಮತ್ತು ಯಾವ ಕಾರ್ಯಕ್ರಮವನ್ನೂ ಆಯೋಜಿಸುತ್ತಿಲ್ಲ. ಮಠದಲ್ಲಿ ಪುನಃ ಹಿಂದಿನಂತೆ ಕಾರ್ಯಕ್ರಮಗಳು ನಡೆಯಲಾರಂಭಿಸಿದರೆ ಸಿದ್ದರಾಮಯ್ಯನವರು ಬರಬಹುದೇನೋ, ಕಾದು ನೋಡೋಣ ಎಂದು ಸ್ವಾಮೀಜಿ ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು