ಭೀಕರ ರಸ್ತೆ ಅಪಘಾತ, ತಲೆಯ ಮೇಲೆ ಟಿಪ್ಪರ್ ಹರಿದು 15 ವರ್ಷದ ವಿದ್ಯಾರ್ಥಿನಿ ಸಾವು
Twitter
Facebook
LinkedIn
WhatsApp
ಶಿವಮೊಗ್ಗ (ಮೇ.29): ಶಿವಮೊಗ್ಗ ತಾಲೂಕಿನ ಹೊಳೆ ಬೆನವಳ್ಳಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ವರ್ಷದ ಶಾಲಾ ಬಾಲಕಿ ದುರಂತ ಸಾವು ಕಂಡಿದ್ದಾಳೆ.
ಹೊಳೆಹೊನ್ನೂರಿನಿಂದ ಬೈಕ್ ನಲ್ಲಿ ಬರುತ್ತಿದ್ದ ತಂದೆ ಮಗಳಿಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ 15 ವರ್ಷದ ಐಶ್ವರ್ಯ ಕೆಳಗೆ ಬಿದ್ದು ಬಾಲಕಿಯ ತಲೆಯ ಮೇಲೆ ಟಿಪ್ಪರ್ ಹರಿದಿದೆ. ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು ಆಕೆಯ ತಂದೆಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.