ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಕಿಪಾಕ್ಸ್ ಪತ್ತೆಗೆ RTPCR ಕಿಟ್ ಬಿಡುಗಡೆಗೊಳಿಸಿದ ಅಶ್ವಥ್‍ನಾರಾಯಣ

Twitter
Facebook
LinkedIn
WhatsApp
ಮಂಕಿಪಾಕ್ಸ್ ಪತ್ತೆಗೆ RTPCR ಕಿಟ್ ಬಿಡುಗಡೆಗೊಳಿಸಿದ ಅಶ್ವಥ್‍ನಾರಾಯಣ

ಬೆಂಗಳೂರು: ಮಂಕಿಪಾಕ್ಸ್ ಪತ್ತೆಹಚ್ಚಲು ಅಭಿವೃದ್ಧಿಪಡಿಸಿರುವ ಆರ್‌ಟಿಪಿಸಿಆರ್ ಕಿಟ್ ಸೇರಿದಂತೆ ಒಂಬತ್ತು ಉತ್ಪನ್ನಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್‍ನಾರಾಯಣ ಬಿಡುಗಡೆ ಮಾಡಿದರು.

ನಿಯೋಡೆಎಕ್ಸ್ ಬಯೋಟೆಕ್ ಲ್ಯಾಬ್ಸ್‌ನ ಡಾ.ಪ್ರಭಾಕರ ಕುಲಕರ್ಣಿ ಅಭಿವೃದ್ಧಿಪಡಿಸಿರುವ ಈ ಕಿಟ್‍ನಿಂದ ಸುಲಭವಾಗಿ ಮಂಕಿಪಾಕ್ಸ್ ವೈರಸ್ ಅನ್ನು ಪತ್ತೆಹಚ್ಚಬಹುದಾಗಿದೆ. ಇದೇ ರೀತಿ ಆರಂಭಿಕ ಹಂತದಲ್ಲೇ ಕ್ಯಾನ್ಸರ್ ಪತ್ತೆಹಚ್ಚಲು ನೆರವಾಗುವ ಅನ್ಕೊ ಡಿಎಕ್ಸ್, ನ್ಯೂ ಹಾರ್ಟ್ ಮತ್ತು ಪ್ಯೂರ್ ವಾಟರ್ ಹೀಗೆ ಒಂಬತ್ತು ಉತ್ಪನ್ನಗಳನ್ನು ಸಚಿವರು ಬಿಡುಗಡೆ ಮಾಡಿದರು.

ಎಲೆಕ್ಟ್ರಾನಿಕ್ಸ್ ಸಿಟಿಯ ಹೆಲಿಕ್ಸ್ ಪಾರ್ಕ್‍ನಲ್ಲಿ ಇರುವ ಮಾನವ ತಳಿಶಾಸ್ತ್ರ ಕೇಂದ್ರವು (ಸಿಎಚ್‍ಜಿ) ಅಪರೂಪದ ರೋಗಗಳ ಸಂಶೋಧನೆ ಮತ್ತು ತರಬೇತಿ ಕೇಂದ್ರವನ್ನು ಸ್ಥಾಪಿಸಿದ್ದು, ಅದರ ನೂತನ ಕಟ್ಟಡ ನಿರ್ಮಾಣಕ್ಕೆ ಅಶ್ವಥ್‍ನಾರಾಯಣ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.

ಸುಮಾರು ನಲವತ್ತು ಸಾವಿರ ಚದರ ಅಡಿ ವಿಸ್ತರಣೆಯ ಮೂರು ಮಹಡಿಯ ಕಟ್ಟಡ ನಿರ್ಮಿಸುತ್ತಿದ್ದು, ಇಲ್ಲಿ ಅಪರೂಪದ ಕಾಯಿಲೆ ಹೊಂದಿರುವ ವರ್ಷಕ್ಕೆ ಸುಮಾರು ಎರಡೂವರೆ ಸಾವಿರ ಕುಟುಂಬಗಳಿಗೆ ಸಮಗ್ರ ಅನುವಂಶಿಕ ಸಮಾಲೋಚನೆ ಸೌಲಭ್ಯ, ಎಕ್ಸೋಮ್ ಸೀಕ್ವೆನ್ಸಿಂಗ್ ಸೇರಿದಂತೆ ರೋಗನಿರ್ಣಯದ ಪರೀಕ್ಷಾ ಸೌಲಭ್ಯದ ಸಾಮರ್ಥ್ಯ ಹೆಚ್ಚಿಸಲು ಬಳಸಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರಸವಪೂರ್ವ ರೋಗನಿರ್ಣಯಕ್ಕಾಗಿ ತರಬೇತಿ ಮತ್ತು ಸೇವಾ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ, ಗರ್ಭಾವಸ್ಥೆಯಲ್ಲಿನ ಅನುವಂಶಿಕ ರೋಗಗಳನ್ನು ಆರಂಭದಲ್ಲೇ ಗುರುತಿಸುವಿಕೆಗೆ ಸಹಾಯ ಮಾಡುವುದು ಕೂಡ ಇದರ ಮುಖ್ಯ ಉದ್ದೇಶ. ಪ್ರಯೋಗಾಲಯದ ತಳಿಶಾಸ್ತ್ರದಲ್ಲಿ ತರಬೇತಿ ನೀಡುವುದಕ್ಕೂ ಕ್ರಮ ತೆಗೆದುಕೊಳ್ಳಲಾಗುವುದು. ಒಟ್ಟಿನಲ್ಲಿ ಅಪರೂಪದ ರೋಗಗಳಿಗೆ ಕಡಿಮೆ ವೆಚ್ಚದ ಚಿಕಿತ್ಸೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಸಂಶೋಧನೆ ಮತ್ತು ಹೊಸ ಔಷಧಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.

ಮಾನವನ ಆರೋಗ್ಯ ಮತ್ತು ಕಾಯಿಲೆಗೆ ಸಂಬಂಧಿಸಿದಂತೆ ತಳಿಶಾಸ್ತ್ರದಲ್ಲಿ ಶಿಕ್ಷಣ, ಅನುವಂಶಿಕ ಕಾಯಿಲೆಗಳ ತರಬೇತಿ ಮತ್ತು ಸಂಶೋಧನೆಗಾಗಿ ರಾಷ್ಟ್ರಮಟ್ಟದಲ್ಲಿ ಶೇಷ್ಟತೆಯ ಕೇಂದ್ರವೆಂದು ಇದನ್ನು ಗುರುತಿಸಿದ್ದು, ಇಪ್ಪತ್ತು ವರ್ಷಗಳಿಂದ ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ಅಪರೂಪದ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸುತ್ತಿದೆ. ಇದಕ್ಕೊಂದು ಕಟ್ಟಡದ ಅಗತ್ಯವನ್ನು ಮನಗಂಡು ನಿರ್ಮಿಸಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಕಳೆದ ಹದಿನೈದು ವರ್ಷಗಳಲ್ಲಿ ಸುಮಾರು ಮೂವತ್ತೈದು ಸಾವಿರ ಕುಟುಂಬಗಳಿಗೆ ಅನುವಂಶಿಕ ರೋಗಗಳನ್ನು ಪತ್ತೆಹಚ್ಚಿ ಅದಕ್ಕೆ ಸೂಕ್ತ ಸಲಹೆ ನೀಡುತ್ತಿರುವುದು ನಿಜಕ್ಕೂ ಮೆಚ್ಚುವಂತಹದ್ದು ಎಂದು ಸಚಿವರು ಅಭಿಪ್ರಾಯಪಟ್ಟರು.  ಕರ್ನಾಟಕ ನಾವಿನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆ (ಕಿಟ್ಸ್)ಯಡಿಯ ಬೆಂಗಳೂರು ಜೈವಿಕ ನಾವಿನ್ಯತಾ ಸಂಸ್ಥೆಯಲ್ಲಿ (ಬಿಬಿಸಿ) ಕಾರ್ಯನಿರ್ವಹಿಸುತ್ತಿರುವ ನಮೋದ್ಯಮಗಳು ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist