ಮಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಮಲೈ ಪುತ್ತೂರಿಗೆ ಮಂಗಳವಾರ ಆಗಮಸಲಿದ್ದಾರೆ ಎಂದು ಬಿಜೆಪಿ ಅಧಿಕೃತ ಪ್ರಕಟಣೆ ತಿಳಿಸಿದೆ.
ಮಂಗಳವಾರ ಪುತ್ತೂರಿಗೆ ಅಣ್ಣಾಮಲೈ; ಬುಧವಾರ ಉಡುಪಿಗೆ ಯೋಗಿ ಆದಿತ್ಯಾನಂದ ಬಿಜೆಪಿ ಪರ ಪ್ರಚಾರ..!
ಇನ್ನೊಂದು ಕಡೆ ಉಡುಪಿಯಲ್ಲಿ ಮಲ್ಪೆ ಬಳಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಂದ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ.
ಲೋಕಸಭೆ ಚುನಾವಣೆ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು
ಲೋಕಸಭೆ ಚುನಾವಣೆ (Lok Sabha Election) ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ (MCC) ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಏ.13 ರಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರದ ವೇಳೆ “ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಡಿ.ಕೆ.ಸುರೇಶ್ ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ” ಎಂದು ಟೀಕಿಸಿದ್ದರು.
ಪ್ರಚಾರ ಸಭೆ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಎಸ್ಎಫ್ಟಿ ಮಹೇಶ್ ದೂರು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ ಘನ 42ನೇ ಅಡಿಷನಲ್ ಸಿಎಂಎಂ ನ್ಯಾಯಲಯ ಆದೇಶ ಆದೇಶದ ಮೇರೆಗೆ ಎಫ್ಐಆರ್ ದಾಖಲಾಗಿದೆ.
ತುರುವೇಕೆರೆಯಲ್ಲಿ ಲೋಕಸಭೆ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ, “ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದು, ಹಳ್ಳಿಯ ಹೆಣ್ಣು ಮಕ್ಕಳ ಬದುಕು ಏನಾಗಬೇಕು ಎಂಬುದರ ಕುರಿತು ಯೋಚನೆ ಮಾಡಬೇಕಾಗಿದೆ,” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೀಡಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿದ್ದರು. ಅಲ್ಲದೇ ರಾಜ್ಯದೆಲ್ಲೆಡೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.