![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಟ್ಟಾರ – ಕೂಳೂರು ಪ್ರಮುಖ ರಸ್ತೆಯಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದ ಮುಂಭಾಗದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ “ಬೃಹತ್ ಉದ್ಯೋಗ ಮೇಳ” ವನ್ನು ಆಯೋಜಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಹೆಸರಾಂತ ಕಂಪನಿಗಳಾದ ಟೀಮ್ ಲೀಸ್, ಸಿನೋಪ್ ಟೆಕ್, ಹೆಚ್.ಜಿ.ಎಸ್, ಬಿ.ಓ.ಎಸ್.ಸಿ.ಹೆಚ್, ಬೈಜೂಸ್, ಟಾಟಾ ಕಮ್ಯುನಿಕೇಷನ್ಸ್, ಟೊಯೊಟಾ ಕಿರ್ಲೋಸ್ಕರ್ ಮೋಟರ್, ಎನ್.ಟಿ.ಟಿ.ಎಫ್ ಸೇರಿದಂತೆ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.
ಬಿಎ, ಬಿ.ಎಸ್ಸಿ, ಬಿಕಾಂ, ಐಟಿಐ, ಡಿಪ್ಲೋಮಾ, ಬಿಇ ಅರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಓರ್ವ ಅಭ್ಯರ್ಥಿಗೆ ಗರಿಷ್ಠವೆಂದರೆ 3 ಕಂಪನಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮ್ಮ ವಿದ್ಯಾರ್ಹತೆಗೆ ಸರಿಹೊಂದುವ 3 ಕಂಪನಿಗಳನ್ನು ಆಯ್ಕೆಮಾಡಿ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಅಶ್ವತ್ ನಾರಾಯಣ್ ಅವರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಾರ್ಯಕ್ರಮದ ಸದಾವಕಾಶ ಪಡೆದುಕೊಳ್ಳಿ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವವರು
www.skillconnet.kaushalkar.com ಇಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವೇದವ್ಯಾಸ್ ಕಾಮತ್ ಅವರ ಶಾಸಕರ ಕಚೇರಿಗೆ ಭೇಟಿ ನೀಡಬಹುದು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist