ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಘರ್ಷಣೆ. ಪೊಲೀಸರ ಮೇಲೂ ದಾಳಿ. 9 ಮಂದಿ ಬಂಧನ.

Twitter
Facebook
LinkedIn
WhatsApp
ಮಂಗಳೂರಿನಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಘರ್ಷಣೆ. ಪೊಲೀಸರ ಮೇಲೂ ದಾಳಿ. 9 ಮಂದಿ ಬಂಧನ.

ಮಂಗಳೂರು: ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಘರ್ಷಣೆ ನಡೆದಿದೆ. ವೈಯಕ್ತಿಕ ವಿಚಾರದ ದ್ವೇಷವೇ ಈ ಹೊಡೆದಾಟಕ್ಕೆ ಕಾರಣ ಎನ್ನಲಾಗಿದೆ.

ಹೊಡೆದಾಟ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು 9 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹದ್, ಅಬುತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದೆ. ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವರಗಳ ಪ್ರಕಾರ, ದೂರುದಾರ ಆದರ್ಶ ಪ್ರೇಮಕುಮಾರ್ (21)ಮೂಲತಃ ಕೇರಳದ ಕೊಲ್ಲಂ ನಿವಾಸಿಯಾಗಿದ್ದು ನಗರದ ಕಾಲೇಜು ಒಂದರಲ್ಲಿ 3 ನೇ ವರ್ಷದ ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್ ಮ ವಿದ್ಯಾರ್ಥಿಯಾಗಿದ್ದಾನೆ. ಈನಗರದ ಲೈಟ್ ಹೌಸ್ ಹಿಲ್ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ.

ಆದರ್ಶ್ ಡಿಸೆಂಬರ್ 2 ರಂದು ಸಂಜೆ 7 ಗಂಟೆಗೆ ತನ್ನ ಸ್ನೇಹಿತ ಅಭಿರಾಮಿ ಜೊತೆ ಮಾತನಾಡುತ್ತಿದ್ದಾಗ, ಸಿನಾನ್ ಮತ್ತು ಅದೇ ಕಾಲೇಜಿನ ಇತರ ಎಂಟು ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದಾರೆ. ಗಲಾಟೆ ಬಿಡಿಸಲು ಬಂಧಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ಅವರಿಗೆ ಜೀವ ಬೆದರಿಕೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

ಈ ಸಂಬಂಧ ಆದಿತ್ಯ, ಕೆನ್ ಜಾನ್ಸನ್, ಮೊಹಮ್ಮದ್, ಅಬ್ದುಲ್ ಶಾಹಿದ್ ಮತ್ತು ವಿಮಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಲಾಟೆ ಬಿಡಿಸಲು ಬಂದಿದ್ದ ತನ್ನ ಸ್ನೇಹಿತರಾದ ಶನಿನ್ ಮತ್ತು ಶ್ರವಣ್ ಅವರು ಗುಜ್ಜರಕರೆ ಬಳಿ ಹಾಸ್ಟೆಲ್ ನಲ್ಲಿ ವಾಸ್ತವ ಇದ್ದು ಅವರು ಅಪಾಯದಲ್ಲಿದ್ದು ರಕ್ಷಣೆ ಮಾಡಲು ಕೋರಿಕೊಂಡಿದ್ದರು.

ಅದರಂತೆ ರಾತ್ರಿ 10 ಗಂಟೆ ಸುಮಾರಿಗೆ ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿ ಹಾಸ್ಟೆಲ್ ಬಳಿ ಹೋದಾಗ ಹಾಸ್ಟೆಲ್ ನಸಿ ವಿದ್ಯಾರ್ಥಿಗಳು ಇಂಟರ್ ಲಾಕ್, ಕಲ್ಲು ಹಾಗೂ ಕುರ್ಚಿಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ. ದಾಳಿಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಬ್ದುಲ್ ಸಿನಾನ್ ಅವರು ಆದರ್ಶ್ ಮತ್ತು ಅವರ ಸ್ನೇಹಿತರ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಫಹಾದ್, ಅಬು ತಾಹರ್, ಮೊಹಮ್ಮದ್ ನಾಸಿಫ್ ಮತ್ತು ಆದರ್ಶ್ ಅವರನ್ನು ಬಂಧಿಸಿದ್ದಾರೆ.

ಈ ಘಟನೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಸಕ್ತ ಪರಿಸ್ಥಿತಿ ಶಾಂತವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಆಯುಕ್ತ ಎನ್ .ಶಶಿಕುಮಾರ್ ತಿಳಿಸಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು