ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಹಿಜಾಬ್ ಕಿಚ್ಚು, ABVP ಬೆಂಬಲಿತ ಕಾಲೇಜು ಅಧ್ಯಕ್ಷ ರಾಜೀನಾಮೆ!

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಹಿಜಾಬ್ ಕಿಚ್ಚು, ABVP ಬೆಂಬಲಿತ ಕಾಲೇಜು ಅಧ್ಯಕ್ಷ ರಾಜೀನಾಮೆ!

ಮಂಗಳೂರು, (ಮೇ.27): ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ ಕಾಲೇಜು ಘಟನೆಗಳಿಂದ ನೊಂದು ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀನಾಮೆ ನೀಡಿದ್ದಾನೆ. ಎಬಿವಿಪಿ ಸಂಘಟನೆ ಬೆಂಬಲಿತ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್ ಆಚಾರ್ಯ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.

ವಿನ್ಯಾಸ್ ಮಂಗಳೂರು ವಿವಿಯ ಅಂತಿಮ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು, ರಾಜೀನಾಮೆ ನಿರ್ಧಾರದ ಬಗ್ಗೆ  ಪ್ರತಿಕ್ರಿಯೆ ನೀಡಿದ್ದಾರೆ. ಕಾಲೇಜಿಗೆ ಹಿಜಾಬ್ ಹಾಕುವ ಬಗ್ಗೆ ನನ್ನದೂ ವಿರೋಧ ಇತ್ತು‌. ಹಿಜಾಬ್ ಬ್ಯಾನ್ ಮಾಡಲು ನಾನು ಪ್ರಾಂಶುಪಾಲರಿಗೆ ಪತ್ರ ಕೊಟ್ಟಿದ್ದೆ. ಹೀಗಾಗಿ ಪ್ರಿನ್ಸಿಪಾಲ್ ಕೂಡ ಹಿಜಾಬ್ ಬ್ಯಾನ್ ಮಾಡಿ ಆದೇಶ ಮಾಡಿದ್ದರು. 

 

ಇನ್ನು ಈ ಹಿಜಾಬ್ ವಿವಾದದ ಬಗ್ಗೆ ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ಹೇಳಿಕೆ ನೀಡಿದ್ದಾರೆ. ಇಡೀ ಕಾಲೇಜಿನಲ್ಲಿ 44 ಮುಸ್ಲಿಂ ಮಕ್ಕಳಿದ್ದು, ವಿವಾದ ಒಂದು ತಂಡದಿಂದಷ್ಟೇ ಆಗಿದೆ. ಒಂದು 15 ಮಂದಿ ವಿದ್ಯಾರ್ಥಿಗಳಷ್ಟೇ ಹಿಜಾಬ್ ಕುರಿತು ಮಾತನಾಡ್ತಿದಾರೆ. ನಿನ್ನೆ ಅವರು ಬಂದಾಗ ನಾವೇ ಅವರನ್ನು ಹಿಜಾಬ್ ತೆಗೆದು ಬನ್ನಿ ಅಂತ ಕಳಿಸಿದ್ದೇವೆ. ಹಾಗಾಗಿ ಅವರು ನಿನ್ನೆ ಡಿಸಿ ಕಚೇರಿಗೆ ಹೋಗಿದ್ದರು, ಆ 15 ಮಂದಿ ಇವತ್ತು ತರಗತಿಗೆ ಬಂದಿಲ್ಲ. ಅವರನ್ನ ಬಿಟ್ಟು ಉಳಿದ ಕೆಲ ಮಕ್ಕಳು ಹಿಜಾಬ್ ತೆಗೆದು ಕಾಲೇಜಿಗೆ ಬಂದಿದ್ದಾರೆ ಎಂದರು.

 

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿ  ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ನೀಡಿದ್ದಾರೆ. ಸಂಜೆ 4 ಗಂಟೆಗೆ ಮಂಗಳೂರು ವಿವಿ ಕುಲಪತಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಈ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾತ್ರ. ವಿಶ್ವವಿದ್ಯಾನಿಲಯದ ಕುಲಪತಿಗಳು ಯೂನಿವರ್ಸಿಟಿ ಕಾಲೇಜಿನ ಮೇಲ್ವೀಚಾರಕರು.‌ ಕುಲಪತಿಗಳು ಸಂಜೆ ಈ ಬಗ್ಗೆ ಸಭೆಯನ್ನು ಕರೆದಿದ್ದಾರೆ, ಸಭೆಯಲ್ಲಿ ಭಾಗವಹಿಸುತ್ತೇನೆ.‌ ಕಾಲೇಜಿನ ಉಪಕುಲಪತಿಗಳಿಂದ ಹಿಡಿದು ಯಾರೂ ನನ್ನ ಗಮನಕ್ಕೆ ತಂದಿಲ್ಲ. ಉಪಕುಲಪತಿಗಳು, ಜಿಲ್ಲಾಧಿಕಾರಿಗಳು ಅವರ ಮನಸ್ಸಿಗೆ ಬಂದ ಹಾಗೆ ಮಾಡಲು ಆಗಲ್ಲ ಎಂದರು.

ನ್ಯಾಯಾಲಯದ ಆದೇಶ ಪಾಲಿಸಬೇಕಾದ ಅನಿವಾರ್ಯತೆ ಅವರಿಗೆ ಇದೆ. ಡಿಸಿಯವರಿಗೂ ಕೋರ್ಟ್ ಆದೇಶ ಉಲ್ಲಂಘನೆ ‌ಮಾಡೋ ಅಧಿಕಾರ ಇಲ್ಲ. ರಾಜಕೀಯ ಮಾಡಿ ಎಸ್ ಡಿಪಿಐ, ಪಿಎಫ್ ಐ ಮತ್ತು ಕಾಂಗ್ರೆಸ್ ಬೆಂಬಲಿತರು ವಿದ್ಯಾರ್ಥಿಗಳನ್ನು ಎತ್ತಿ ಕಟ್ಟಿದ್ದಾರೆ‌. ಕಾಲೇಜನ್ನ ಜೆಎನ್ ಯೂ ಮಾಡಲು ಮಂಗಳೂರಿನಲ್ಲಿ ನಾವು ಬಿಡಲ್ಲ‌. ಮಂಗಳೂರಿನ ಮಣ್ಣಿನಲ್ಲಿ ಹುಟ್ಡಿದವರಿಗೆ ದೇಶ ಹಾಳು ಮಾಡಲು ಅವಕಾಶ ಇಲ್ಲ. ಸರ್ಕಾರ ಮತ್ತು ಕೋರ್ಟ್ ನಿಯಮ ಪಾಲಿಸದೇ ಇದ್ರೆ ಅಧ್ಯಾಪಕರೇ ಕೋರ್ಟ್ ಮೆಟ್ಟಲು ಹತ್ತಬೇಕಾಗುತ್ತದೆ. ಕಾಲೇಜಿನಲ್ಲಿ ಕೋರ್ಟ್ ನಿಯಮ ಅನುಷ್ಠಾನ ಆಗದ ವಿಚಾರ ಗೊತ್ತಾಗಿದೆ. ಇದರಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುವುದರ ಬಗ್ಗೆ ಸಭೆ ಮಾಡುತ್ತೇವೆ ಎಂದು ಹೇಳಿದರು.

ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಕೋರ್ಟ್ ನಿಯಮವನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಎಲ್ಲರೂ ಕೋರ್ಟ್ ನಿಯಮವನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಲ ಅಧ್ಯಾಪಕರು ಹಿಜಾಬ್ ಧಾರಿ ವಿದ್ಯಾರ್ಥಿನಿಯರಿಗೆ ಬೆಂಬಲ ನೀಡಿರುವ ಆರೋಪ ಇದೆ. ಜವಾಬ್ದಾರಿಯುತ ಅಧ್ಯಾಪಕರು ಈ ರೀತಿ ಮಾಡುವುದು ಸರಿಯಲ್ಲ. ವೈಯಕ್ತಿಕ ಹಿತಾಸಕ್ತಿಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ