ಮಂಗಳವಾರ, ಏಪ್ರಿಲ್ 30, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: 'ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಗಲಾಟೆ' - ಯುವಕನ ಕೊಲೆ

Twitter
Facebook
LinkedIn
WhatsApp
allwyn 080323 crm

ಮಂಗಳೂರು, ಮಾ 08 : ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ.

ಮೃತರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ (19) ಇಬ್ಬರ ನಡುವೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ ಸಂಜಯ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಆತ ಕೊನೆಯುಸಿರೆಳೆದಿದ್ದ.

ಘಟನೆ ಮಾ.5 ರಂದು ರಾತ್ರಿ 8.30ಕ್ಕೆ ನಡೆದಿತ್ತು. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಸೋಹನ್‌ನನ್ನು ಬಜ್ಪೆ ಪೊಲೀಸರು ಮಂಗಳೂರು ರೈಲು ನಿಲ್ದಾಣದ ಬಳಿಮಾ. 7 ರಂದು ಮಧ್ಯಾಹ್ನ 1 ಗಂಟೆ ವೇಳೆಗೆ ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ