ಮಂಗಳೂರು: ಕರಾವಳಿಯಲ್ಲಿ ಎಲ್ಲೋ ಅಲರ್ಟ್ - ಸಾಧಾರಣ ಮಳೆ ಸಾಧ್ಯತೆ
Twitter
Facebook
LinkedIn
WhatsApp
ಮಂಗಳೂರು, ಏ 06 : ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಏ.೭ ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ದಾಖಲಾಗಿದೆ. ಇದೇ ರೀತಿ ಬುಧವಾರದಿಂದ ಮುಂದಿನ ಐದು ದಿನವು ಬರಲಿದೆ.
ಐದು ದಿನಗಳ ಪೈಕಿ ಏಪ್ರಿಲ್ 8ರವರೆಗೆ ಕರಾವಳಿ ಭಾಗದಲ್ಲಿ ಮಳೆ ತುಸು ಬಿರುಸುಕೊಳ್ಳಲಿದೆ. ಇದನ್ನು ಬಿಟ್ಟರೆ ದಕ್ಷಿಣ ಒಳನಾಡಿನ ಭಾಗದಲ್ಲಿ ಹಗುರ ಇಲ್ಲವೇ ಸಾಧಾರಣವಾಗಿ ಮಳೆ ಬರಬಹುದು.
ಶುಕ್ರವಾರ ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.