ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು: ಪತ್ನಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣ; ಪತಿಗೆ ಕಠಿಣ ಜೈಲು ಶಿಕ್ಷೆ

Twitter
Facebook
LinkedIn
WhatsApp
ಮಂಗಳೂರು: ಪತ್ನಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣ; ಪತಿಗೆ ಕಠಿಣ ಜೈಲು ಶಿಕ್ಷೆ

ಮಂಗಳೂರು: ಪತ್ನಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಪತಿಗೆ ಮೂರು ವರ್ಷಗಳ ಕಠಿಣ ಜೈಲುಶಿಕ್ಷೆ ಮತ್ತು 19,500 ರೂ. ದಂಡ ವಿಧಿಸಿ ಮಂಗಳೂರಿನ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ.
ನಗರದ ಶಕ್ತಿನಗರ ನಿವಾಸಿ, ರಿಕ್ಷಾ ಚಾಲಕ ಶಿವಕುಮಾರ್ (45) ಶಿಕ್ಷೆಗೊಳಗಾದ ಆರೋಪಿ.

2019ರ ಫೆ. 20ರಂದು ರಾತ್ರಿ ಆರೋಪಿ ಶಿವಕುಮಾರ್ ಮನೆಗೆ ತೆರಳಿ ಪತ್ನಿ ಸಾಕಮ್ಮ (39) ಮತ್ತು ಪುತ್ರಿಗೆ ಹೀನಾಯವಾಗಿ ನಿಂದಿಸಿದ್ದ. ಈ ಸಂದರ್ಭದಲ್ಲಿ ಪತ್ನಿ ಸಾಕಮ್ಮ ಮನೆಯಿಂದ ಹೊರಗೆ ಬಂದಾಗ ಶಿವಕುಮಾರ್ ಆಕೆಯ ಎರಡೂ ಕೈಗಳಿಗೆ ಮತ್ತು ಕಾಲುಗಳಿಗೆ ಕಬ್ಬಿಣದ ಸರಳಿನಿಂದ ತೀವ್ರವಾಗಿ ಹೊಡೆದಿದ್ದನು ಎಂದು ಆರೋಪಿಸಲಾಗಿತ್ತು. ಈ ಹಲ್ಲೆಯಿಂದ ಸಾಕಮ್ಮ ಅವರ ಎರಡೂ ಮೊಣಕೈ ಮತ್ತು ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಐಪಿಸಿ ಸೆಕ್ಷನ್ 341, 324, 326, 407, 506 ಅನ್ವಯ ಪ್ರಕರಣ ದಾಖಲಾಗಿತ್ತು. ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 3 ನೇ ಸಿಜೆಎಂ (ಕಿರಿಯ ವಿಭಾಗ) ಮತ್ತು ಜೆಎಂಎ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಧುಕರ ಭಾಗವತ್ ಅವರು ಶನಿವಾರ ಆರೋಪಿಗೆ ಐಪಿಸಿ 341 ಅನ್ವಯ 500 ರೂ. ದಂಡ, ಐಪಿಸಿ 324 ಅನ್ವಯ ಎರಡು ವರ್ಷ ಕಠಿಣ ಶಿಕ್ಷೆ ಮತ್ತು 9000 ರೂ. ದಂಡ ಹಾಗೂ ಐಪಿಸಿ 326 ಅನ್ವಯ 3 ವರ್ಷ ಕಠಿಣ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿ ಎರಡೂ ಸೆಕ್ಷನ್‌ಗಳಡಿ ವಿಧಿಸಲಾಗಿರುವ ಶಿಕ್ಷೆಯನ್ನು ಏಕ ಕಾಲದಲ್ಲಿ ಅನುಭವಿಸುವಂತೆ ಆದೇಶಿಸಿದ್ದಾರೆ.

ದಂಡ ಮೊತ್ತದಲ್ಲಿ 19,000 ರೂ.ನ್ನು ಸಂತ್ರಸ್ತೆ ಸಾಕಮ್ಮ ಅವರಿಗೆ ಹಾಗೂ 500 ರೂ.ಗಳನ್ನು ಸರಕಾರಕ್ಕೆ ಪಾವತಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ 7 ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು 6 ದಾಖಲೆಗಳನ್ನು ನ್ಯಾಯಾಲಯ ಪರಿಗಣಿಸಿತ್ತು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ನೇತ್ರಾವತಿ ವಾದಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು