ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಬಾಲಕನಿಗೆ ಲಾಠಿ ಏಟು, ಪೊಲೀಸರ ದುರ್ವರ್ತನೆ ವಿರುದ್ದ ಸ್ಥಳೀಯರ ಆಕ್ರೋಶ

Twitter
Facebook
LinkedIn
WhatsApp
ms 020123 beach

ಮಂಗಳೂರು, ಜ 02 :  ನಗರದ ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಘಟನೆ ನಡೆದಿದ್ದು, ” ಪೊಲೀಸರ ಅತಿರೇಕದ ವರ್ತನೆ” ಎಂದು ಸ್ಥಳೀಯರು ಕಿಡಿಕಾರಿದ ಘಟನೆ ನಡೆದಿದೆ.

 

6 ನೇ ತರಗತಿಯ ವಿದ್ಯಾರ್ಥಿ ಮತ್ತು ಪಿಯು ವಿದ್ಯಾರ್ಥಿಗಳ ಮೇಲೆ ಕೂಡಾ ಪೊಲೀಸರು ಲಾಠಿ ಬೀಸಿರುವುದು ಕಂಡು ಸ್ಥಳೀಯರು ಗರಂ ಆಗಿದ್ದು ಪೊಲೀಸರ ವಿರುದ್ದ ತಿರುಗಿಬಿದ್ದಿದ್ದಾರೆ.

ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್‌ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಟ್ರಾಪಿಕ್ ಜಾಮ್ ಆಗಿತ್ತು. ಈ ವೇಳೆ ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಹುಡುಗರನ್ನು ಅಡ್ಡಗಟ್ಟಿದ ಪೊಲೀಸರು, ನಿಮ್ಮಿಂದಲೇ ಬ್ಲಾಕ್ ಆಗಿದೆಯೆಂದು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಲಾಠಿ ಏಟಿನಿಂದ 6ನೇ ತರಗತಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಸಾರ್ವಜನಿಕರು ಪೊಲೀಸರಿಗೆ ಘೇರಾವ್ ಹಾಕಿದ್ದು, ಮೂವರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ಮೂವರು ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ