ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಎಫೆಕ್ಟ್. ಭೂಕುಸಿತದ ಕುರಿತಂತೆ ಗಮನ ಸೆಳೆದ ವಿಷಯದ ಬಗ್ಗೆ ಅಲರ್ಟ್ ಆದ ಜಿಎಸ್ಐ. ವಿಜ್ಞಾನಿಗಳ ತಂಡ ಮುಂದಿನ ವಾರ ಮಡಿಕೇರಿಗೆ!

Twitter
Facebook
LinkedIn
WhatsApp
Dr. Mantar Gowda: ಮಡಿಕೇರಿ ಶಾಸಕ ಡಾ. ಮಂತರ್ ಗೌಡ

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಎಫೆಕ್ಟ್. ಭೂಕುಸಿತದ ಕುರಿತಂತೆ ಗಮನ ಸೆಳೆದ ವಿಷಯದ ಬಗ್ಗೆ ಅಲರ್ಟ್ ಆದ ಜಿಎಸ್ಐ. ವಿಜ್ಞಾನಿಗಳ ತಂಡ ಮುಂದಿನ ವಾರ ಮಡಿಕೇರಿಗೆ!

ಮಡಿಕೇರಿ: ಮಡಿಕೇರಿಯ ಭೂಕುಸಿತಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಲು ಹಾಗೂ ಲ್ಯಾಂಡ್ ಸ್ಲೈಡ್ ಸಸ್ಪೆಕ್ಟಿಭವ್ ಮ್ಯಾಪ್ (Landslide suspectibility Mapping-LSM) ಗೆ ಸಂಬಂಧಪಟ್ಟಂತೆ ಮಡಿಕೇರಿಯ ಶಾಸಕ ಡಾ. ಮಂತರ್ ಗೌಡ ನಿರಂತರ ಟ್ವೀಟ್, ಮಾಧ್ಯಮ ಹೇಳಿಕೆ ಹಾಗೂ ಮನವಿಯ ನಂತರ ಜಿಯೋ ಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ಅಲರ್ಟ್ ಆಗಿದ್ದು, ಮುಂದಿನ ವಾರ ಮಡಿಕೇರಿಗೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮಕ್ಕೆ ತಿಳಿಸಿರುವ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜ ಜಿಎಸ್ಐ ಬೂಕುಸಿತದ ಪ್ರದೇಶದ ಅಧ್ಯಯನಕ್ಕೆ ಜಿಯೋ ಲಾಜಿಕಲ್ ಸರ್ವೆ ಆಫ್ ಇಂಡಿಯಾ (Geological Survey of India)  ಮುಂದಿನ ವಾರ ಮಡಿಕೇರಿಗೆ ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ರವರು ಸೂಕ್ತ ಸಂದರ್ಭದಲ್ಲಿ ರಾಜ್ಯ ಹಾಗೂ ದೇಶದ ಆಡಳಿತ ವ್ಯವಸ್ಥೆ ಗಮನ ಸೆಳೆಯುವ ವಿಷಯವನ್ನು ಮಂಡಿಸಿರುವುದು ಬಹುತೇಕರ ಶ್ಲಾಘನೆಗೆ ಪಾತ್ರವಾಗಿದೆ.

ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ಅಗತ್ಯತೆಯನ್ನು ಬಹಳಷ್ಟು ಸೂಕ್ಷ್ಮವಾಗಿ ತಿಳಿಸಿರುವ ಡಾ. ಮಂತರ್ ಗೌಡ, ಮ್ಯಾಪ್೦ಗ್ ಹಾಗೂ ಈ ಇಲಾಖೆಯ ಮಹತ್ವವನ್ನು ಒತ್ತಿ ಹೇಳಿರುವುದು ಭೂಕುಸಿತದ ವಿಷಯದಲ್ಲಿ ಭವಿಷ್ಯದ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೊಸ ಮಾರ್ಗ ಒದಗಿಸಿದೆ ಎಂದು ವಿಶ್ಲೇಷಣಕಾರರು ಅಭಿಪ್ರಾಯಪಟ್ಟಿದ್ದಾರೆ.

ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಒನ್ ಬಹುತೇಕರು ಹೆಚ್ಚು ಮಹತ್ವದ ಇಲಾಖೆ ಅಲ್ಲ, ಕೇವಲ ಮೈನಿಂಗ್ ಹಾಗೂ ಇತರ ವಿಷಯಗಳಿಗೆ ಎನ್ನೋಸಿ (NOC) ನೀಡುವ ಇಲಾಖೆ ಎಂದು ಪರಿಗಣಿಸಿದ್ದರು. ಆದರೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಜಿಲೇಜಿಕಲ್ ಸರ್ವೆ ಆಫ್ ಇಂಡಿಯಾ ನಮಗೆ ಎಷ್ಟು ಅಗತ್ಯವಿದೆ ಎಂಬುದನ್ನು ಸಾರಿ ಹೇಳಿದ್ದಾರೆ ಎಂದು ಹಿರಿಯ ವಿಜ್ಞಾನಿ ಯೋಬ್ಬರು ಅಭಿಪ್ರಾಯ ಪಟ್ಟಿದ್ದಾರೆ.

ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, 5,000 ಉದ್ಯೋಗ ಸೃಷ್ಟಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ (ESDM) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮ ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಆಗಸ್ಟ್ 6) ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಸಹಯೋಗದಲ್ಲಿ 4ನೆ ಆವೃತ್ತಿ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ನೀಡಿರುವ ಮೈಸೂರನ್ನು ಉದ್ಯೋಗಶೀಲ ನಗರವನ್ನಾಗಿ ವರ್ಧಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ ಎಂದು ಸಚಿವರು ಸಂದೇಶದಲ್ಲಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist