ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ ಚಲಾಯಿಸುವಂತೆ ಪೋಷಕರಿಗೆ ಪತ್ರ ಬರೆದ ಶಾಲಾ ವಿದ್ಯಾರ್ಥಿಗಳು!

Twitter
Facebook
LinkedIn
WhatsApp
mcms 1 3

ಮೈಸೂರು :  ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ಘೋಷಣೆಯಾಗಿದೆ. ಈ ಹಿನ್ನೆಲೆ ಶಾಲಾ ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಯರು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಅಂಚೆ ಪತ್ರದ ಮೂಲಕ ಮನವಿ ಮಾಡಿದರು.

ಹೌದು, ಮೈಸೂರು ತಾಲೂಕು ಪಂಚಾಯತ್‌ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸ್ವೀಪ್‌ ಚಟುವಟಿಕೆಯಡಿ ವಿಭಿನ್ನ ಕಾರ್ಯಕ್ರಮವಾಗಿ ನಡೆಸಲಾದ ಅಂಚೆ ಚೀಟಿ ಅಭಿಯಾನದಲ್ಲಿ ಶಾಲಾ ಮಕ್ಕಳು ಭಾಗವಹಿಸಿ, ಪತ್ರ ಬರೆಯುವ ಮೂಲಕ ತಮ್ಮ ಪೋಷಕರಿಗೆ ವಿನಂತಿಸಿಕೊಂಡರು.

ಪತ್ರದಲ್ಲಿ ಪ್ರೀತಿಯ ಅಪ್ಪ, ಅಮ್ಮನಿಗೆ ಸಮಸ್ಕಾರಗಳು. ನಾವೀಗ ಕರ್ನಾಟಕ ವಿಧಾನಸಭಾ ಚುನಾವಣಾ ಹಬ್ಬಕ್ಕೆ ಸಜ್ಜಾಗುತ್ತಿದ್ದೇವೆ. ಸದೃಢ ದೇಶದ ನಿರ್ಮಾಣಕ್ಕಾಗಿ ಇದೇ ಮೇ 10 ರಂದು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸಂವಿಧಾನದ ಆಶಯವನ್ನು ಸಾಕಾರಗೊಳಿಸಿ ಎಂದು ವಿದ್ಯಾರ್ಥಿಗಳು ಕೋರಿದ್ದಾರೆ.

ಮೈಸೂರು ತಾಲೂಕಿನ ಜಯಪುರ, ನಾಗವಾಲ, ಆಲನಹಳ್ಳಿ, ಹಾರೋಹಳ್ಳಿ, ಎಂಬಿ ಹಳ್ಳಿ, ದೊಡ್ಡಮಾರಗೌಡನಹಳ್ಳಿ, ವರುಣ, ಹಾರೋಹಳ್ಳಿ (ಮೆ) ಸೇರಿದಂತೆ ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಈ ಅಭಿಯಾನವನ್ನು ನಡೆಸಲಾಗಿದೆ.

ತಾಪಂ ಇಒ ಎಚ್‌.ಡಿ. ಗಿರೀಶ್‌ ಅವರ ನೇತೃತ್ವದಲ್ಲಿ ಅಭಿಯಾನವನ್ನು ನಡೆಸಲಾಗಿದ್ದು, ಪಿಡಿಒಗಳು ಮತ್ತು ಶಾಲಾ ಶಿಕ್ಷಕರರು ಮತದಾನ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಸ್ಥಳೀಯ ಮುಖಂಡರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ