ಮತ್ತಷ್ಟು ಎತ್ತರಕ್ಕೆ ಜಿಗಿದ ಚಿನ್ನದ ಬೆಲೆ
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೇರುವ ವೇಗ ಹೆಚ್ಚಾಗಿದೆ. ಚಿನ್ನದ ಬೆಲೆ ಭಾರತದಲ್ಲಿ 10 ಗ್ರಾಮ್ಗೆ 700ರಿಂದ 760 ರುಪಾಯಿಗಳಷ್ಟು (Gold Rates Hike) ಏರಿಕೆ ಕಂಡಿದೆ. ಬೆಳ್ಳಿ ಬೆಲೆ 100 ಗ್ರಾಮ್ಗೆ 250 ರುಪಾಯಿಯಷ್ಟು ದುಬಾರಿಯಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಏರುತ್ತಲೇ ಬಂದಿದೆ. ಮುಂದಿನ ದಿನಗಳಲ್ಲೂ ಚಿನ್ನದ ಬೆಲೆ ಏರುವ ನಿರೀಕ್ಷೆ ಇದೆ.
ಭಾರತದಲ್ಲಿ ಭಾರತದಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 53,150 ರುಪಾಯಿಗೆ ಏರಿದೆ. ಶನಿವಾರವಷ್ಟೇ ಬೆಲೆಗಳು 51 ಸಾವಿರ ಮಟ್ಟಕ್ಕಿಂತ ಕಡಿಮೆ ಇತ್ತು. ಈಗ ಭಾರತದ ಎಲ್ಲಾ ನಗರಗಳಲ್ಲೂ 22 ಕ್ಯಾರಟ್ ಚಿನ್ನದ ಬೆಲೆ 53 ಸಾವಿರ ರೂ ಗಡಿ ದಾಟಿ ಹೋಗಿದೆ. ಚೆನ್ನೈನಲ್ಲಿ 54 ಸಾವಿರ ರೂ ಗಡಿ ಸಮೀಪ ಹೋಗಿದೆ. 24 ಕ್ಯಾರಟ್ ಚಿನ್ನದ ಬೆಲೆ 760 ರೂನಷ್ಟು ಈ ಬಾರಿ ಏರಿಕೆಯಾಗಿದೆ.
ಬೆಳ್ಳಿ ಬೆಲೆ ಭಾರತದಲ್ಲಿ 100 ಗ್ರಾಮ್ಗೆ 6,600 ರುಪಾಯಿ ಆಗಿದೆ. ಇನ್ನು, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, 10 ಗ್ರಾಮ್ಗೆ 53,200 ರುಪಾಯಿಗೆ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿ ಆಗಿದೆ. ದಕ್ಷಿಣ ಭಾರತದ ವಿವಿಧೆಡೆ ಮತ್ತು ಒಡಿಶಾದಲ್ಲಿ ಬೆಳ್ಳಿ ಬೆಲೆ ಏಕಸ್ಥಿತಿಯಲ್ಲಿದೆ.
ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಭಾರತಕ್ಕೆ ಹೋಲಿಸಿದರೆ ಕಡಿಮೆ ಇದೆ. ಯುಎಇಯ ಭಾಗವಾಗಿರುವ ದುಬೈ, ಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಬೆಲೆ ತುಸು ಹೆಚ್ಚೇ ಏರಿಕೆಯಾಗಿದೆ. ಮಲೇಷ್ಯಾದಲ್ಲಿ ಚಿನ್ನದ ಬೆಲೆ 50 ಸಾವಿರ ರೂ ಗಡಿ ದಾಟಿದೆ. ಕತಾರ್, ಓಮನ್, ಕುವೇತ್ ದೇಶಗಳಲ್ಲಿ 50 ಸಾವಿರ ಗಡಿ ಸಮೀಪ ಬೆಲೆ ಹೋಗುತ್ತಿದೆ.