ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ವಿಶ್ವದ ನಂ.1 ಶ್ರೀಮಂತ ವ್ಯಕ್ತಿ ಸ್ಥಾನಕ್ಕೇರಿದ ಎಲೋನ್ ಮಸ್ಕ್

Twitter
Facebook
LinkedIn
WhatsApp
elon musk twitter

ವಾಷಿಂಗ್ಟನ್: ಕಳೆದ 2 ತಿಂಗಳ ಹಿಂದೆ ವಿಶ್ವದ ಶ್ರೀಮಂತ ವ್ಯಕ್ತಿಗಳ (World’s Richest Person) ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಇಳಿದಿದ್ದ ಟೆಸ್ಲಾ (Tesla) ಹಾಗೂ ಟ್ವಿಟ್ಟರ್ (Twitter) ಸಿಇಒ ಎಲೋನ್ ಮಸ್ಕ್ (Elon Musk) ಇದೀಗ ಮತ್ತೆ ನಂ.1 ಸ್ಥಾನವನ್ನು ಮರಳಿ ಪಡೆದಿದ್ದಾರೆ.

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಪ್ರಕಾರ ಎಲೋನ್ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಬಿರುದನ್ನು ಮರಳಿ ಪಡೆದಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಫ್ರೆಂಚ್ ಐಷಾರಾಮಿ ಬ್ರ‍್ಯಾಂಡ್ ಲೂಯಿ ವಿಟಾನ್‌ನ ಸಿಇಒ ಬರ್ನಾರ್ಡ್ ಅರ್ನಾಲ್ಟ್ ಅವರು ಎಲೋನ್ ಮಸ್ಕ್ ಅವರನ್ನು ಹಿಂದಿಕ್ಕಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಸ್ಥಾನವನ್ನು ಪಡೆದಿದ್ದರು. ಇದೀಗ 2 ತಿಂಗಳು ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದ ಮಸ್ಕ್ ಮತ್ತೆ ಮೊದಲನೇ ಸ್ಥಾನಕ್ಕೆ ಮರಳಿದ್ದಾರೆ.

ವರದಿಗಳ ಪ್ರಕಾರ ಈ ವರ್ಷ ಟೆಸ್ಲಾ ಕಂಪನಿಯ ಷೇರುಗಳ ಮೌಲ್ಯ ಶೇ.70 ರಷ್ಟು ಏರಿಕೆಯಾಗಿರುವುದೇ ಮಸ್ಕ್ ಮತ್ತೆ ತಮ್ಮ ಸ್ಥಾನವನ್ನು ಮರಳಿ ಪಡೆಯಲು ಕಾರಣವಾಗಿದೆ. ಅಂದಾಜಿನ ಪ್ರಕಾರ ಸೋಮವಾರ ಷೇರು ಪೇಟೆ ಮುಕ್ತಾಯವಾದ ಬಳಿಕ ಮಸ್ಕ್ ಸಂಪತ್ತಿನ ಮೌಲ್ಯ 187.1 ಬಿಲಿಯನ್ ಡಾಲರ್ (ಸುಮಾರು 15.46 ಲಕ್ಷ ಕೋಟಿ ರೂ.) ಆಗಿದ್ದು, 185.3 ಬಿಲಿಯನ್ ಡಾಲರ್ (ಸುಮಾರು 15.29 ಲಕ್ಷ ಕೋಟಿ ರೂ.) ಸಂಪತ್ತಿನ ಮೌಲ್ಯ ಹೊಂದಿರುವ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. 

ಈಗ ಮೊದಲ ಸ್ಥಾನ ಏರಿದರೂ ಟೆಸ್ಲಾ ಮುಖ್ಯಸ್ಥನ ನಿವ್ವಳ ಸಂಪತ್ತಿನ ಮೌಲ್ಯ ಕಳೆದ ವರ್ಷ ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ 200 ಶತಕೋಟಿ ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಇತ್ತೀಚಿನ ಇತಿಹಾಸದಲ್ಲೇ ಅತಿ ದೊಡ್ಡ ಸಂಪತ್ತಿನ ನಷ್ಟಗಳಲ್ಲಿ ಒಂದಾಗಿದೆ.

ಇದೆಲ್ಲದರ ನಡುವೆ ಮಸ್ಕ್ ಟ್ವಿಟ್ಟರ್ ಅನ್ನು ಸ್ವಾಧೀನಪಡಿಸಿಕೊಂಡ ಬಳಿಕ ಅವರು ಕಂಪನಿಯಲ್ಲಿ ವೆಚ್ಚವನ್ನು ಕಡಿತಗೊಳಿಸಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ. 44 ಬಿಲಿಯನ್ ಡಾಲರ್ ಖರ್ಚು ಮಾಡಿ ಟ್ವಿಟ್ಟರ್ ಅನ್ನು ಖರೀದಿಸಿದ ಮಸ್ಕ್ ಕಂಪನಿ ದಿನಕ್ಕೆ ಸುಮಾರು 4 ಮಿಲಿಯನ್ ಡಾಲರ್ ನಷ್ಟವನ್ನು ಅನುಭವಿಸುತ್ತಿದೆ ಎಂದು ನವೆಂಬರ್‌ನಲ್ಲಿ ತಿಳಿಸಿದ್ದರು. ಈ ಹಿನ್ನೆಲೆ ಅವರು ಕಂಪನಿಯ ಅರ್ಧಕ್ಕಿಂತಲೂ ಹೆಚ್ಚಿನ ಉದ್ಯೋಗಿಗಳನ್ನು ವಜಾಗೊಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ