ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆಯಾಗಲು ನಿರಾಕರಿಸಿದ್ದಕ್ಕೆ ಲೈವ್‌ ವೀಡಿಯೋ ಮಾಡಿ ಯುವಕ ಆತ್ಮಹತ್ಯೆ

Twitter
Facebook
LinkedIn
WhatsApp
assam suicide 780x450 1

ದಿಸ್ಪುರ: ಪ್ರೇಯಸಿ ಮದುವೆಯಾಗಲು ನಿರಾಕಸಿದ್ದಕ್ಕೆ ಮನನೊಂದು ಯುವಕನೊಬ್ಬ ಫೇಸ್‌ಬುಕ್‌ನಲ್ಲಿ ಲೈವ್‌ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.

ಜಯದೀಪ್‌ ರಾಯ್‌ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ಕುಟುಂಬದವರ ಒತ್ತಡದಿಂದಾಗಿ ನನ್ನ ಗೆಳತಿ ನನ್ನನ್ನು ಮದುವೆಯಾಗಲು ನಿರಾಕರಿಸಿದಳು ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನನ್ನ ಮಗನ ಸಾವಿಗೆ ಯುವತಿಯ ಮನೆಯವರೇ ಕಾರಣ ಎಂದು ಯುವಕನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಜಯದೀಪ್‌ ರಾಯ್ ಸಿಲ್ಚಾರ್‌ನಲ್ಲಿರುವ ತನ್ನ ಬಾಡಿಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೇಸ್‌ಬುಕ್ ಲೈವ್‌ನಲ್ಲಿ, “ನಾನು ಮದುವೆಯ ಪ್ರಸ್ತಾಪವನ್ನು ಕಳುಹಿಸಿದ್ದೆ. ಆದರೆ ಅವಳು ನಿರಾಕರಿಸಿದಳು. ಗೆಳತಿಯ ಚಿಕ್ಕಪ್ಪ ಕೊಲೆ ಬೆದರಿಕೆ ಹಾಕಿದ್ದ. ಅವಳು ನನ್ನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ನಾನು ಇಹಲೋಕ ತ್ಯಜಿಸುತ್ತೇನೆ” ಎಂದು ಯುವಕ ಹೇಳಿಕೊಂಡಿದ್ದಾನೆ.

“ನನ್ನ ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಸಹೋದರಿ, ಅಣ್ಣ ಮತ್ತು ಸೋದರ ಮಾವನಿಗೆ ಕ್ಷಮಿಸಿ ಎಂದು ಕೇಳಿಕೊಳ್ಳುತ್ತೇನೆ. ನಾನು ನಿಮ್ಮೆಲ್ಲರನ್ನೂ ಪ್ರೀತಿಸುತ್ತೇನೆ. ಆದರೆ ನಾನು ನನ್ನ ಗೆಳತಿಯನ್ನು ಹೆಚ್ಚು ಪ್ರೀತಿಸುತ್ತೇನೆ. ಅವಳಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ” ಎಂದು ವೀಡಿಯೋದಲ್ಲಿ ಮಾತನಾಡಿದ್ದಾನೆ.

ಕುಟುಂಬದವರಿಂದ ನಮಗೆ ಇನ್ನೂ ಯಾವುದೇ ಔಪಚಾರಿಕ ದೂರು ಬಂದಿಲ್ಲ. ಆದರೆ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ನುಮಲ್ ಮಹಂತ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ