ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆಗಾಲದ ಅಬ್ಬರ ಎದುರಿಸಲು ಮಲೆನಾಡಿನಲ್ಲಿ ಸರಕಾರ ಸಿದ್ಧವಾಗಿದೆಯೇ?

Twitter
Facebook
LinkedIn
WhatsApp
ಮಳೆಗಾಲದ ಅಬ್ಬರ ಎದುರಿಸಲು ಮಲೆನಾಡಿನಲ್ಲಿ ಸರಕಾರ ಸಿದ್ಧವಾಗಿದೆಯೇ?

ಕಳೆದ ಮೂರು ವರ್ಷಗಳಿಂದ ಜುಲೈ, ಆಗಸ್ಟ್ ತಿಂಗಳಲ್ಲಿ ಮಲೆನಾಡಿನಲ್ಲಿ ವರುಣ ಅಬ್ಬರಿಸುತ್ತ ಇದ್ದಾನೆ. ಮಳೆಯ ಅಬ್ಬರ ಜೋರಾಗಿದೆ. ಅಲ್ಲದೆ ಪರ್ವತ ,ಬೆಟ್ಟಗಳ ಕುಸಿತವು ಜೋರಾಗಿದೆ. ಇಂತಹ ಸಂದರ್ಭದಲ್ಲಿ ಈ ಬಾರಿಯೂ ಮಳೆಯ ಅಬ್ಬರ ಜೋರಾದರೆ, ಅದನ್ನು ಎದುರಿಸಲು ಸರಕಾರ ಸಿದ್ಧವಾಗಿದೆಯೇ ಎಂಬ ಪ್ರಶ್ನೆ ಜನತೆಯನ್ನು ಕಾಡುತ್ತಿದೆ.

ಮಲೆನಾಡಿನ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಕಳೆದ ಮೂರು ವರ್ಷಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದರು.

ಬೆಟ್ಟ ಕುಸಿತಗಳ ಭೀಕರ ಸ್ಥಿತಿಯನ್ನು ಕಳೆದ ಮೂರು ವರ್ಷಗಳಿಂದ ಈ ಪ್ರದೇಶಗಳು ನೋಡುತ್ತ ಬಂದಿವೆ. ಅದರಲ್ಲೂ ಕೊಡಗಿನಲ್ಲಿ ಭೀಕರವಾಗಿ ಬೆಟ್ಟ ಕುಸಿತದ ಪ್ರಸಂಗಗಳು ಜರುಗಿವೆ. ಈ ಬಾರಿ ಏನಾಗಬಹುದು ಎಂದು ಈ ಪ್ರದೇಶದ ಜನರು ಯೋಚಿಸುತ್ತಿದ್ದಾರೆ. ಅದರಲ್ಲೂ ಕೊಡಗಿನ ಮಂದಿ ಈ ಬಾರಿಯೂ ಮಳೆ ಜೋರಾದಾಗ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಹೆಚ್ಚಾಗಿ ಪ್ರತಿವರ್ಷ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಈ ಪ್ರಕರಣಗಳು ವರದಿಯಾಗಿದ್ದು, ಕೆಲವೇ ದಿನಗಳಲ್ಲಿ ಜುಲೈ ತಿಂಗಳು ನಮ್ಮ ಮುಂದಕ್ಕೆ ಬರಲಿದೆ.

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕಳೆದ ಮೂರು ವರ್ಷಗಳಿಂದ ಈ ಪ್ರದೇಶದಲ್ಲಿ ಜರುಗಿದ ಬೆಟ್ಟ ಕುಸಿತದ ಪ್ರಕರಣಗಳು ಮತ್ತೊಮ್ಮೆ ಆಗಬಾರದು ಎಂದು ಈ ಪ್ರದೇಶದ ಜನರು ಪ್ರಾರ್ಥಿಸುತ್ತಿದ್ದಾರೆ.

ಜಿಲ್ಲಾಡಳಿತ ಮತ್ತು ಸರಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಹಿಂದಿಗಿಂತಲೂ ಹೆಚ್ಚಾಗಿದೆ. ಯಾಕೆಂದರೆ ಕಳೆದ ಮೂರು ವರ್ಷಗಳ ಅನುಭವಗಳ ಆಧಾರದ ಮೇಲೆ ಈ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಆಗುವ ಹಾನಿಯನ್ನು ತಪ್ಪಿಸಬಹುದು. ಆ ಮೂಲಕ ಜನರ ಭಯವನ್ನು ಹೋಗಲಾಡಿಸಬಹುದು. ಸರ್ಕಾರ ಮತ್ತು ಜಿಲ್ಲಾಡಳಿತ ಗೆ ಜನರಲ್ಲಿ ಆತಂಕ ಇರದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು