ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಂಡೌಸ್ ಚಂಡಮಾರುತ – ನೆರೆಯ ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ

Twitter
Facebook
LinkedIn
WhatsApp
ಮಾಂಡೌಸ್ ಚಂಡಮಾರುತ – ನೆರೆಯ ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ

ನವದೆಹಲಿ: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ. ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

 

ಡಿಸೆಂಬರ್ 10ರ ವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಗಾಳಿಯೂ ಬೀಸಲಿದೆ ಎಂದು ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ