ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ- 140ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

Twitter
Facebook
LinkedIn
WhatsApp
ACCIDENT Graphic 768x491 2

ಭುವನೇಶ್ವರ, ಮಾ 10 : ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬುಧವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಂಪ್ಲೆಕ್ಸ್‌ನ ಹೊಟೇಲ್‌ವೊಂದರಲ್ಲಿ ತಂಗಿದ್ದ 140ಕ್ಕೂ ಹೆಚ್ಚು ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಾಂಪ್ಲೆಕ್ಸ್‌ನಲ್ಲಿದ್ದ ಇತರರನ್ನೂ ರಕ್ಷಿಸಲಾಗಿದೆ. ಇನ್ನು ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಕೆಲವು ಸಿಬಂದಿಗಳಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ