ಕರಾವಳಿಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಸಂಘಟನೆಯನ್ನು ವಿಸ್ತರಿಸಲು ಯೋಚಿಸುತ್ತಿದ್ದು, ಇದರ ಭಾಗವಾಗಿ ಸುಳ್ಯದಲ್ಲಿ ಮಾರ್ಚ್ 21ರಂದು ಸಮಾವೇಶವನ್ನು ಆಯೋಜಿಸಿದೆ.
ಈ ಸಮಾವೇಶದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ನಾಯಕರು ಆಗಮಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಆಮ್ ಆದ್ಮಿ ಪಕ್ಷದ ವೀಕ್ಷಕರಾದ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಯುವಕರು ನಮ್ಮ ಪಕ್ಷದತ್ತ ಕರಾವಳಿ ಜಿಲ್ಲೆಗಳಲ್ಲಿ ಬಹಳಷ್ಟು ಆಸಕ್ತಿ ತೋರಿಸುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ ಎಂದವರು ಹೇಳಿದರು.
ಸುಳ್ಯದ ಸಮಾವೇಶದಲ್ಲಿ ಸದಸ್ಯತ್ವ ಸ್ವೀಕಾರ ಹಾಗೂ ಪಂಜಾಬಿನಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಜರುಗಲಿದೆ ಎಂದು ಅಶೋಕ್ ಎಡಮಲೆ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಶೀದ್ ಜಟ್ಟಿಪಳ್ಳ, ದೀಕ್ಷಿತ್ ಜಯನಗರ ಉಪಸ್ಥಿತರಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist