ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುತಾಲಿಕ್ ವಿರುದ್ದ ಸುನಿಲ್ ಕುಮಾರ್ ವಾಗ್ದಾಳಿ!

Twitter
Facebook
LinkedIn
WhatsApp
Sunil Kumar

ಉಡುಪಿ: ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಬಳಿಕವು ಕಾರ್ಕಳದಲ್ಲಿ ಮಾತ್ರ ಹಗ್ಗ ಜಗ್ಗಾಟ ಮುಗಿದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಮೋದ್ ಮುತಾಲಿಕ್ ತಮ್ಮ ಶಿಷ್ಯ ಸುನಿಲ್ ಕುಮಾರ್ ಎದುರೇ ತೊಡೆ ತಟ್ಟಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರನ್ನು ಜರದಿದ್ದ ಪ್ರಮೋದ್ ಮುತಾಲಿಕ್ ಅವರಿಗೆ ಚುನಾವಣೆ ಗೆದ್ದ ಬಳಿಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಈ ಬಾರಿ ಅತ್ಯಂತ ಕುತೂಹಲ ಮೂಡಿಸಿದ್ದ ಕ್ಷೇತ್ರಗಳಲ್ಲಿ ಒಂದು. ಇಂಧನ ಸಚಿವ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಎದುರು ಕಾಂಗ್ರೆಸ್​ನ ಅಭ್ಯರ್ಥಿಯೇ ಇಲ್ಲ ಎನ್ನುವ ಕಾಲದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಪ್ರಮೋದ್ ಮುತಾಲಿಕ್ ಪಕ್ಷೇತರರಾಗಿ ಸ್ಪರ್ಧೆಗೆ ನಿಂತಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು.

ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎನ್ನುವ ವಿವಾದವನ್ನೇ ಹುಟ್ಟು ಹಾಕಿದ್ದರು. ಸದ್ಯ ಇದೇ ಪ್ರಮೋದ್ ಮುತಾಲಿಕ್ ತಮ್ಮ ವಿರುದ್ಧ ಶಿಷ್ಯ ಸುನೀಲ್ ಕುಮಾರ್ ಮಾಡಿದ ಆರೋಪಕ್ಕೆ ದೇವರ ಮೊರೆ ಹೋಗಿದ್ದಾರೆ.

ಚುನಾವಣೆ ಮುಗಿಯುವವರೆಗೂ ಪ್ರಮೋದ್ ಮುತಾಲಿಕ್ ವಿರುದ್ಧವಾಗಿ ಒಂದೇ ಒಂದು ಮಾತನಾಡದ ಸುನಿಲ್ ಕುಮಾರ್, ಕಾಲ ಬಂದಾಗ ಎಲ್ಲದಕ್ಕೂ ಉತ್ತರವನ್ನು ನೀಡಲು ಸಿದ್ಧನಿದ್ದೇನೆ. ಸದ್ಯ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ನನ್ನ ಗಮನ ಹರಿಸಿದ್ದೇನೆ ಎನ್ನುವ ರೀತಿಯಲ್ಲಿ ಉತ್ತರ ನೀಡಿದ್ದರು. ಕೊನೆಗೂ ಫಲಿತಾಂಶ ಹೊರ ಬಿದ್ದು ಸುನಿಲ್ ಕುಮಾರ್ ಪ್ರತಿಸ್ಪರ್ಧಿ ಮುನಿಯಲು ಉದಯಕುಮಾರ್ ಶೆಟ್ಟಿ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದರು. ಅಲ್ಲದೆ ಸಾಕಷ್ಟು ಭರವಸೆ ಮೂಡಿಸಿದ್ದ ಪ್ರಮೋದ್ ಮುತಾಲಿಕ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತೆ ಮಾಡಿದ್ದರು.

ಗೆದ್ದ ಬಳಿಕ ವಿಜಯೋತ್ಸವದ ಸಂಭ್ರಮದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡುತ್ತಾ, ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ನಿಟ್ಟಿನಲ್ಲಿ ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿರುವುದು ಸದ್ಯ ಜಿಲ್ಲೆಯಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ.

ಒಟ್ಟಾರೆಯಾಗಿ ರಾಜ್ಯದಾದ್ಯಂತ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ನಡೆಯುತ್ತಿದ್ದರೆ ಜಿಲ್ಲೆಯಲ್ಲಿ ಮಾತ್ರ ಗುರು ಶಿಷ್ಯರ ವಾಗ್ವಾದ ತಾರಕ್ಕೇರಿದೆ. ಪ್ರಮೋದ್ ಮುತಾಲಿಕ್ ಸೋಲಿಂದ ಬೇಸರಗೊಂಡು ತಮ್ಮ ಊರಿಗೆ ತೆರಳಿದ್ದರೆ ಇತ್ತ ಸುನೀಲ್ ಕುಮಾರ್ ಚುನಾವಣೆಗೂ ಮೊದಲು ಪ್ರತಿಸ್ಪರ್ಧಿಗಳು ಆಡಿದ ಒಂದೊಂದು ಮಾತಿಗೂ ಉತ್ತರ ನೀಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist