ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!
Twitter
Facebook
LinkedIn
WhatsApp

ಬಾಲಕಿಯ ಪೋಷಕರು ಮೂಡುಬಿದಿರೆ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ದಿವ್ಯಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ನೀಟ್ ಪರೀಕ್ಷೆಯಲ್ಲಿ ಅಂಕ ಬರುವುದಿಲ್ಲ ಎಂಬ ಭಯದಲ್ಲಿದ್ದಳು ಎಂದಿದ್ದಾರೆ.
ದಿವ್ಯಾ ಭಾನುವಾರ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಶನಿವಾರ ತಡರಾತ್ರಿಯೇ ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ