ಬುಧವಾರ, ಮೇ 8, 2024
ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!-ನಾಳೆ SSLC ಪಲಿತಾಂಶ ಪ್ರಕಟ ; ಇಲ್ಲಿದೆ ಲಿಂಕ್-ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಲ್ಕಿ: ನೇಣಿಗೆ ಶರಣಾದ ವಾಮದಪದವು ಕಾಲೇಜಿನ ಅತಿಥಿ ಉಪನ್ಯಾಸಕಿ

Twitter
Facebook
LinkedIn
WhatsApp

ಮೂಲ್ಕಿ : ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಇವರು ಅತಿಥಿ ಉಪನ್ಯಾಸಕಿಯಾಗಿದ್ದು, ವಾಮದಪದವು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು. ಇವರ ಸಾವಿನ ಸುದ್ದಿ ತಿಳಿದು ಇಡೀ ಕಾಲೇಜು ಇಂದು ಮೌನವಾಗಿದೆ. ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ