ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನಲ್ಲಿ ಮೋದಿ 2 ದಿನ- ಎಲ್ಲೆಲ್ಲಿಗೆ ಭೇಟಿ..?, ಕಾರ್ಯಕ್ರಮಗಳೇನು..?

Twitter
Facebook
LinkedIn
WhatsApp
ಮೈಸೂರಿನಲ್ಲಿ ಮೋದಿ 2 ದಿನ- ಎಲ್ಲೆಲ್ಲಿಗೆ ಭೇಟಿ..?, ಕಾರ್ಯಕ್ರಮಗಳೇನು..?

ಮೈಸೂರು: ಅಂತರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಿಗೆ ಆಗಮಿಸುವ ಮೋದಿ ಅವರ ಕಾರ್ಯಕ್ರಮ ಪಟ್ಟಿ ಅಂತಿಮವಾಗಿದೆ. ಜೂನ್ 20 ಮತ್ತು 21 ಎರಡು ದಿನ ಪ್ರಧಾನಿ ಮೋದಿ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಹೌದು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ. ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಯಿಂದ 6.15 ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.


ಒಂದು ಕಾಲು ಗಂಟೆಯ ಸಂವಾದ ಮುಗಿಸಿ ಅಲ್ಲಿಂದ ನೇರವಾಗಿ ಚಾಮುಂಡಿ ಬೆಟ್ಟದ ಪಾದದ ಬಳಿಯ ಶ್ರೀ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. 7.15 ರವರೆಗೆ ಪ್ರಧಾನಿಗಳು ಮಠದಲ್ಲಿ ಇರಲಿದ್ದಾರೆ. ಮಠದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ 7.30 ಕ್ಕೆ ಸರಿಯಾಗಿ ಆಗಮಿಸಲಿರುವ ಪ್ರಧಾನಿ, 15 ನಿಮಿಷ ಬೆಟ್ಟದಲ್ಲಿ ಇರಲಿದ್ದಾರೆ. ತಾಯಿ ದರ್ಶನ ಮುಗಿಸಿ ರಾಯ್ಡಿಸನ್ ಹೋಟೆಲ್ ಗೆ ಬಂದು ವಾಸ್ತವ್ಯ ಹೂಡಲಿದ್ದಾರೆ.

ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 6.30ಕ್ಕೆ ಆರಂಭವಾಗುವ ಯೋಗ 7.45 ಕ್ಕೆ ಮುಕ್ತಾಯವಾಗಲಿದೆ. ಕಾರ್ಯಕ್ರಮದ ನಂತರ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ್ ಅವರನ್ನು ಅರಮನೆಯ ಹಿಂಭಾಗದಲ್ಲಿನ ರಾಜವಂಶಸ್ಥರ ಮನೆಯಲ್ಲೆ ಭೇಟಿಯಾಗುವ ಸಾಧ್ಯತೆ ಇದೆ.

ನಂತರ ಅಲ್ಲಿಂದ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಕೇರಳಕ್ಕೆ ತೆರಳಲಿದ್ದಾರೆ. ಚಾಮುಂಡಿ ತಾಯಿ ದರ್ಶನ, ಸುತ್ತೂರು ಮಠಕ್ಕೆ ಭೇಟಿ ಹಾಗೂ ಯದುವಂಶದ ರಾಜವಂಶಸ್ಥರ ಜೊತೆ ಮಾತುಕತೆ ಮೋದಿ ಅವರ ಯೋಗ ಕಾರ್ಯಕ್ರಮ ಹಿನ್ನೆಲೆಯಲ್ಲಿನ ಪ್ರಮುಖ ಭೇಟಿಗಳಾಗಿವೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ