ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಕ್ಷಗಾ‌ನ ಕಲಾವಿದ, ಮಂಗಳೂರಿನ ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ಇನ್ನಿಲ್ಲ

Twitter
Facebook
LinkedIn
WhatsApp
ಯಕ್ಷಗಾ‌ನ ಕಲಾವಿದ, ಮಂಗಳೂರಿನ ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ಇನ್ನಿಲ್ಲ
ಯಕ್ಷಗಾ‌ನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(90) ಅವರು ವಯೋಸಹಜ ಅನಾರೋಗ್ಯ ಕಾರಣದಿಂದ ವಿಧಿವಶರಾಗಿದ್ದಾರೆ.

ಮಂಗಳೂರು: ಯಕ್ಷರಂಗದ ಅಪ್ರತಿಮ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(90) ಅವರು ವಯೋಸಹಜ ಅನಾರೋಗ್ಯ ಕಾರಣದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ‌ ಸಲ್ಲಿಸಿದ್ದರು.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20 ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ ಕುಂಬಳೆ ಸುಂದರ್ ರಾವ್ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ‌ ಸಲ್ಲಿಸಿದ್ದಾರೆ. ಜೊತೆಗೆ ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ‌ಗೆ ಪಾತ್ರರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ