ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಾಹೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,600ಕ್ಕೂ ಹೆಚ್ಚು ಉದ್ಯೋಗಿಗಳು

Twitter
Facebook
LinkedIn
WhatsApp
ಯಾಹೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,600ಕ್ಕೂ ಹೆಚ್ಚು ಉದ್ಯೋಗಿಗಳು

ನವದೆಹಲಿ: ವಾಲ್ಟ್ ಡಿಸ್ನಿ 7,000 ಮಂದಿ ಉದ್ಯೋಗಿಗಳ ವಜಾ ಘೋಷಿಸಿದ ಬೆನ್ನಲ್ಲೇ ಟೆಕ್ ಕಂಪನಿ ಯಾಹೂ (Yahoo) ಕೂಡ ಶೇ 20ಕ್ಕೂ ಹೆಚ್ಚು ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ (Layoff). ತಂತ್ರಜ್ಞಾನ ಘಟಕದ ಪುನರ್​​ರಚನೆ ಪ್ರಕ್ರಿಯೆಯ ಭಾಗವಾಗಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ತಿಳಿಸಿದೆ ಎಂದು ಕಂಪನಿಯ ಮೂಲಗಳನ್ನು ಉಲ್ಲೇಖಿಸಿ ‘ಆ್ಯಕ್ಷಿಯೋಸ್’ ಮಾಧ್ಯಮ ವರದಿ ಮಾಡಿದೆ. ಈ ಉದ್ಯೋಗ ಕಡಿತವು ಯಾಹೂವಿನ ತಂತ್ರಜ್ಞಾನ ಘಟಕದ ಶೇ 5ರಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. 1,600ಕ್ಕೂ ಹೆಚ್ಚು ಉದ್ಯೋಗಿಗಳು ವಜಾಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಇದರೊಂದಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಮತ್ತೆ ಮುಂದುವರಿದಿದೆ. 7,000 ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ ಅಮೆರಿಕದ ಮನರಂಜನಾ ಮಾಧ್ಯಮ ವಾಲ್ಟ್ ಡಿಸ್ನಿ ಗುರುವಾರ ಘೋಷಿಸಿತ್ತು.

ಗ್ರಾಹಕರು ವೆಚ್ಚ ಕಡಿಮೆ ಮಾಡಿರುವುದು ಸ್ಟ್ರೀಮಿಂಗ್ ಚಂದಾದಾರಿಕೆ ಮೇಲೆ ಪರಿಣಾಮ ಬೀರಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಮೊದಲ ಬಾರಿಗೆ ಚಂದಾದಾರರ ಸಂಖ್ಯೆಯಲ್ಲಿ ಕಡಿತವಾಗಿದೆ ಎಂದು ವಾಲ್ಟ್ ಡಿಸ್ನಿ ತಿಳಿಸಿತ್ತು. ಮೂರು ತಿಂಗಳ ಹಿಂದಿನ ಅಂಕಿಸಂಖ್ಯೆಗೆ ಹೋಲಿಸಿದರೆ ಡಿಸೆಂಬರ್ 31ರ ವೇಳೆಗೆ ಡಿಸ್ನಿ ಪ್ಲಸ್​​ ಚಂದಾದಾರರ ಸಂಖ್ಯೆ 168.1 ದಶಲಕ್ಷಕ್ಕೆ ಇಳಿಕೆಯಾಗಿತ್ತು. ಆದಾಗ್ಯೂ ಡಿಸ್ನಿಯ ಷೇರು ಮೌಲ್ಯ ಶೇ 8ರ ವೃದ್ಧಿಯೊಂದಿಗೆ ವಹಿವಾಟು ನಡೆಸುತ್ತಿದೆ ಎಂದು ವರದಿಯಾಗಿತ್ತು.

ಅಮೆರಿಕದ ಅನೇಕ ತಂತ್ರಜ್ಞಾನ ಕಂಪನಿಗಳು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿವೆ. ಅತಿದೊಡ್ಡ ಟೆಕ್ ಕಂಪನಿ ಗೂಗಲ್​ ಜನವರಿಯಲ್ಲಿ 12,000 ಉದ್ಯೋಗಿಗಳ ವಜಾ ಘೋಷಿಸಿತ್ತು. ಅಮೆಜಾನ್, ಮೆಟಾ, ಟ್ವಿಟರ್, ಪಿಂಟ್​ರೆಸ್ಟ್, ಫಿಲಿಪ್ಸ್, ಐಬಿಎಂ ಸೇರಿದಂತೆ ಹತ್ತಾರು ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಭಾರತದಲ್ಲೂ ವಿಪ್ರೋ, ಇನ್ಫೋಸಿಸ್, ಬೈಜೂಸ್ ಸೇರಿದಂತೆ ಅನೇಕ ಕಂಪನಿಗಳು ಉದ್ಯೋಗ ಕಡಿತದ ಮೊರೆ ಹೋಗಿವೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಲಾಭದಲ್ಲಿ ಕುಸಿತ, ಸಂಭಾವ್ಯ ಆರ್ಥಿಕ ಹಿಂಜರಿತಕ್ಕೆ ಸಿದ್ಧರಾಗುವ ಪ್ರಕ್ರಿಯೆಯ ಭಾಗವಾಗಿ ಮತ್ತು ವೆಚ್ಚ ಕಡಿತದ ಉದ್ದೇಶದೊಂದಿಗೆ ಕಂಪನಿಗಳು ಉದ್ಯೋಗಿಗಳ ವಜಾಗೊಳಿಸುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ