ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವಕನಿಗೆ ತಂಡದಿಂದ ಚೂರಿ ಇರಿತ - ಹಳೆ ದ್ವೇಷದ ಶಂಕೆ

Twitter
Facebook
LinkedIn
WhatsApp
ಯುವಕನಿಗೆ ತಂಡದಿಂದ ಚೂರಿ ಇರಿತ – ಹಳೆ ದ್ವೇಷದ ಶಂಕೆ

ವಿಟ್ಲ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ ನಾಲ್ವರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ದೂರು ನೀಡಿದ್ದಾರೆ.ಅಬ್ದುಲ್ ಹ್ಯಾರಿಸ್ ಅವರು ಸಾಲೆತ್ತೂರಿನಿಂದ ತನ್ನ ಮನೆಗೆ ಬೈಕ್‌‌ನಲ್ಲಿ ಬರುತ್ತಿದ್ದಾಗ ಹಿಂದಿನಿಂದ ಬಂದ ಅವಿನಾಶ್, ವಿನೀತ್, ದಿನೇಶ್ ಮತ್ತು ಮತ್ತೊಬ್ಬ ಅಪರಿಚಿತ ವ್ಯಕ್ತಿ ಸೇರಿ ಹ್ಯಾರಿಸ್ ಅವರ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಕೈಯಿಂದ ಹೊಡೆದು, ಬೈಕಿನಿಂದ ದೂಡಿಹಾಕಿದ್ದು, ಬಳಿಕ ಅವಿನಾಶ್ ಎಂಬಾತ ಚೂರಿಯಿಂದ ಹ್ಯಾರಿಸ್ ಅವರ ಬೆನ್ನಿಗೆ ಚುಚ್ಚಿದ್ದಾರೆ. ಬಳಿಕ ನೀನು ನಮ್ಮ ತಂಟೆಗೆ ಬಂದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ತೆರಳಿದ್ದಾರೆ.
ಈ ಹಲ್ಲೆಗೆ ಕೆಲ ಸಮಯದ ಹಿಂದೆ ಅವಿನಾಶ್‌‌ನ ತಂಗಿಗೆ ಕೀಟಲೆ ಮಾಡಿದ್ದಾನೆ ಎಂದು ಹಾರೀಸ್ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಪೂರ್ವ ದ್ವೇಷದಿಂದ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು