ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

Twitter
Facebook
LinkedIn
WhatsApp
ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಸೋಶಿಯಲ್ ಮೀಡಿಯಾದಲ್ಲಿ ರಾತ್ರೋರಾತ್ರಿ ಫೇಮಸ್ ಆಗಬೇಕು ಎಂದು ಅದೇಷ್ಟೋ ಯುವತಿಯರು ಫೇಸ್‍ಬುಕ್, ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಾಕಿ ಲೈಕ್, ಕಾಮೆಂಟ್‍ಗಳನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದ್ರೆ, ಇಲ್ಲೊಬ್ಬ ಆಸಾಮಿ ಅದೇ ಸುಂದರ ಯುವತಿಯರ ಫೋಟೋ ಬಳಸಿಕೊಂಡು ಸುಮಾರು ಯುವಕರಿಗೆ 19 ಲಕ್ಷ ರೂ. ಗೂ ಅಧಿಕ ಹಣ ಪೀಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನಾಯಿಹಿಂಗ್ಲಜ್ ಗ್ರಾಮದ ಮಹಾಂತೇಶ್ ಮೂಡಸೆ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆಗೆದ ಬಂಧಿತ ಆರೋಪಿ. ಆರು ವರ್ಷಗಳ ಹಿಂದೆ ಅಂದರೆ 2016ರಲ್ಲಿ ಎಂ.ಸ್ನೇಹಾ ಹೆಸರಿನಲ್ಲಿ ಫೇಕ್ ಐಡಿ ಸೃಷ್ಟಿಸಿ ಫೇಸ್‍ಬುಕ್, ಇನ್‍ಸ್ಟಾಗ್ರಾಮ್ ಖಾತೆ ತೆರೆದಿದ್ದಾನೆ.

ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

ಹೇಗೆ ಮಾಡುತ್ತಿದ್ದ?
ಹಣ ಮಾಡಲು ಕಳ್ಳದಾರಿ ಹಿಡಿದ ಮಹಾಂತೇಶ್ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ಯುವತಿಯರ ಸುಂದರ ಫೋಟೋಗಳನ್ನು ಡೌನ್ಲೋಡ್ ಮಾಡಿಟ್ಟಿಕೊಳ್ಳುತ್ತಿದ್ದನು. ವಾಟ್ಸಾಪ್‍ನ ಡಿಪಿಗೂ ಅದೇ ಯುವತಿಯ ಫೋಟೋಗಳನ್ನು ಹಾಕಿಕೊಳ್ಳುತ್ತಿದ್ದ. ಬಳಿಕ ಫೇಸ್‍ಬುಕ್, ಇನ್‍ಸ್ಟಾಗ್ರಾಮ್‍ನಲ್ಲಿ ಯುವಕರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ. 

ಯುವತಿ ಫೋಟೋಗಳನ್ನು ನೋಡಿ ಫಾಲೋ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡಿ ಅವರನ್ನು ಪರಿಚಯ ಮಾಡಿಕೊಂಡು ಸಲುಗೆಯಿಂದ ಇರುತ್ತಿದ್ದ. ಚೆಂದದ ಯುವತಿಯ ಫೋಟೋಗಳನ್ನು ನೋಡಿ ಮರುಳಾದ ಯುವಕರಿಂದ ಅವರ ಫೋನ್ ನಂಬರ್‌ಗಳನ್ನು ಪಡೆದುಕೊಳ್ಳುತ್ತಿದ್ದ. ಆದ್ರೆ, ಯುವಕರೊಂದಿಗೆ ಫೋನ್‍ನಲ್ಲಿ ಮಾತನಾಡದೇ ಕೇವಲ ಚಾಟ್ ಮಾಡುತ್ತಿದ್ದ

ಹಣ ಪಡೆದು ನಂಬರ್ ಬ್ಲಾಕ್
ಈ ವೇಳೆ ಕೆಲವು ಯುವಕರಿಗೆ ಫೋಟೊಗಳನ್ನ ವಾಟ್ಸಪ್ ಮಾಡುತ್ತಿದ್ದ. ಈ ವೇಳೆ ಹಣದ ಅವಶ್ಯಕತೆ ಇದೆ ಅಂತಾ ಹತ್ತು ಸಾವಿರ, ಇಪ್ಪತ್ತು ಸಾವಿರ, ಐವತ್ತು ಸಾವಿರವರೆಗೂ ಹಣ ಹಾಕಿಸಿಕೊಂಡು ಬಳಿಕ ನಂಬರ್ ಬ್ಲಾಕ್ ಮಾಡುತ್ತಿದ್ದ. ಹೀಗೆ ಒಂದೇ ಯುವತಿ ಫೋಟೋ ಹಾಕಿದ್ದ ಅಕೌಂಟ್‍ಗೆ ಹದಿನೈದು ಸಾವಿರ ಫಾಲೋವರ್ಸ್ ಇದ್ದಾರೆ.

ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

ಯುವತಿಗೆ ಶಾಕ್
ತನ್ನ ಫೋಟೋ ಬೇರೆಯವರು ಬಳಸುತ್ತಿದ್ದ ವಿಚಾರ ತಿಳಿದ ಯುವತಿ ಶಾಕ್ ಆಗಿದ್ದಾರೆ. ಇತ್ತ ಯುವತಿ ದುಬೈನಲ್ಲಿದ್ದರೂ ತನ್ನ ಫೋಟೋ ಮಿಸ್ ಯೂಸ್ ಆಗಿದ್ದನ್ನ ಕಂಡು ಶಾಕ್ ಆಗಿ ಖುದ್ದು ಮಹಾಂತೇಶ್‍ಗೆ ಮೆಸೇಜ್ ಮಾಡಿ ಅಕೌಂಟ್ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ. ಇಷ್ಟಾದರೂ ಆತ ಕೇಳದ ಹಿನ್ನೆಲೆ ಜು.4ರಂದು ಬೆಳಗಾವಿಗೆ ಆಗಮಿಸಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪಿಎಸ್‍ಐ ದೈಹಿಕ ಪರೀಕ್ಷೆ ಪಾಸ್ ಆಗಿದ್ದ
ಮಹಾಂತೇಶ್ ಕಳೆದ ಹಲವು ದಿನಗಳ ಹಿಂದೆ ನಡೆದಿದ್ದ ಪಿಎಸ್‍ಐ ದೈಹಿಕ ಪರೀಕ್ಷೆ ಪಾಸ್ ಆಗಿದ್ದ ಎಂಬ ವಿಚಾರ ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ. ಯುವಕರಿಗೆ ಮೋಸ ಮಾಡಿ ಬಂದ ಹಣವನ್ನ ತೆಗೆದುಕೊಂಡು ಗೋವಾಗೆ ಹೋಗಿ ತನ್ನ ಗೆಳೆಯರೊಂದಿಗೆ ಮೋಜು-ಮಸ್ತಿ ಎಂದು ಸುತ್ತಾಡಿದ್ದಾನೆ. ಒಟ್ಟಾರೆ, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಾಕುವ ಮುನ್ನವೇ ಯುವತಿಯರು ಎಚ್ಚರಿಕೆಯಿಂದ ಇರಬೇಕು ಎಂದು ಬೆಳಗಾವಿ ಕಮಿಷನರ್ ಡಾ.ಎಂ.ಬಿ.ಬೋರಲಿಂಗಯ್ಯ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ