ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯೋಜನೆಗಳ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ದೇಶಾದ್ಯಂತ ಪ್ರಕೋಷ್ಟಗಳ ರಚನೆ

Twitter
Facebook
LinkedIn
WhatsApp
ಯೋಜನೆಗಳ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ದೇಶಾದ್ಯಂತ ಪ್ರಕೋಷ್ಟಗಳ ರಚನೆ
 

ಚಿಕ್ಕಮಗಳೂರು: ಭಾರತ ಸಶಕ್ತ, ಸಮೃದ್ಧ, ಸ್ವಾಭಿಮಾನಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಕೇಂದ್ರ ಸರ್ಕಾರ ರೂಪಿಸಿದ ಯೋಜನೆಗಳು ಮೂಲಕ ಇದರ ಪರಿಕಲ್ಪನೆ ಸಾಕಾರಗೊಳ್ಳುತ್ತಿದ್ದು ಇದನ್ನು ಜನತೆಯ ಪ್ರಕೋಷ್ಟUಳು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿದ್ದ ಸೇವಾ ಸುಶಾನನ ಬಡವರ ಕಲ್ಯಾಣದ ಅಭಿಯಾನದ ಸಮಾರಂಭ ಉದ್ಘಾಟನೆ ಹಾಗೂ ಪ್ರಕೋಷ್ಟಗಳ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ದೇಶ ಸಮೃದ್ಧ, ಸ್ವಾಭಿಮಾನಿ, ಸಮರ್ಥ ರಾಷ್ಟ್ರವಾಗುವತ್ತ ಹೆಜ್ಜೆ ಹಿಡುತ್ತಿದೆ. ಕೇಂದ್ರ ಸರ್ಕಾರ ರೂಪಿಸಿದ ಯೋಜನೆಗಳನ್ನು ಜನತೆಗೆ ತಲುಪಿಸುವ ನಿಟ್ಟಿನಲ್ಲಿ ದೇಶಾದ್ಯಂತ ಪ್ರಕೋಷ್ಟಗಳ ರಚನೆ ಮಾಡಿ ಈ ಮೂಲಕ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದರು.

ಬಿಜೆಪಿ ನಡೆದು ಬಂದ ದಾರಿ, ಪಕ್ಷದ ಇಚ್ಚಾಶಕ್ತಿ, ಏರುಪೇರುಗಳು ಮುಂದಿನ ಪೀಳಿಗೆಗೆ ಪ್ರೇರಕವಾಗಲಿವೆ. ಕೋವಿಡ್ ಸಂದರ್ಭದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ ಫಾರ್ ಚಿಲ್ದ್ರನ್ ಯೋಜನೆ ರೂಪಿಸಿ ಅವರ ಜವಾಬ್ದಾರಿಯನ್ನು ಸರ್ಕಾರ ಹೊತ್ತಿದೆ. ಕೃಷಿ ಸಮ್ಮಾನ್ ಯೋಜನೆ ಮೂಲಕ ರೈತರ ಖಾತೆಗೆ ನೇರವಾಗಿ ೧೦ ಸಾವಿರ ಹಣ ಪಾವತಿಸಲಾಗುತ್ತಿದೆ. ಆಡಳಿತದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು. ಆಲೋಚನೆ, ಅಭಿವೃದ್ಧಿಯಲ್ಲಿ ದೇಶ ದಾಪುಗಾಲಿಡುತ್ತಿದೆ ಇದನ್ನು ಜನತೆಯ ಮುಂದಿಡುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕಿದೆ ಎಂದರು.

 

ಈ ಹಿಂದೆ ದೇಶ ಭಯೋತ್ಪಾದಕತೆಯ ಹಡಗುತಾಣವಾಗಿತ್ತ. ಕಾಶ್ಮೀರದಲ್ಲಿ ದೇಶದ ತ್ರಿವರ್ಣ ಧ್ವಜ ಹಾರಿಸಲು ಅವಕಾಶವಿರಲಿಲ್ಲ, ಪ್ರಧಾನಿ ನರೇಂದ್ರ ಮೋದಿಯವರು ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ೩೭೦ ಜಮ್ಮುಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಪಡಿಸಿ ಏಕತೆ ಭಾರತಕ್ಕೆ ನಾಂದಿ ಹಾಡಿದ್ದಾರೆ. ದೇಶ ಸಮರ್ಥವಾಗಿದೆ. ಬದಲಾವಣೆಯಾಗುತ್ತಿದೆ. ಶಕ್ತಿಶಾಲಿಯಾಗಿದೆ ಎಂಬ ಪರಿಕಲ್ಪನೆಯನ್ನು ಜನತೆಗೆ ಬಿತ್ತರಿಸಬೇಕು ಎಂದರು.

ಪ್ರಧಾನಿಯವರ ೮ ವರ್ಷದ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರದ ಚುಕ್ಕೆಗಳಿಲ್ಲದೇ ಆಡಳಿತ ನಡೆಸಿದ್ದಾರೆ, ಉಕ್ರೇನ್, ರಷ್ಯಾ ಯುದ್ದದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇಡೀ ಅಮೇರಿಕಾ ಒಳಗೊಂಡಂತೆ ಜಗತ್ತು ಭಾರತವನ್ನು ಗೌರವಿಸುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲಲಿದೆ ಎಂದರು.

ಪ್ರತಿಪಕ್ಷಗಳ ಟೀಕೆಗೆ ಅಭಿವೃದ್ಧಿ ಕಾರ್ಯಗಳು ಉತ್ತರಿಸಲಿವೆ. ಆರ್‌ಎಸ್‌ಎಸ್ ಕುರಿತು ಟೀಕಿಸುವ ಸಿದ್ದರಾಮಯ್ಯ ಅವರು ಈ ಹಿಂದೆ ಜವಾಹರ್‌ಲಾಲ್ ನೆಹರೂ ಪ್ರಧಾನಿಗಳಾಗಿದ್ದಾಗ ಆರ್‌ಎಸ್‌ಎಸ್‌ನ್ನು ಹೊಗಳಿ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಹ್ವಾನಿಸಿದ್ದರು, ಇದೀಗ ಟೀಕೆ ಮಾಡುವುದು ಸರಿಯಲ್ಲ ಎಂದರು.

ಶಾಸಕ ಸಿ.ಟಿ ರವಿ ಮಾತನಾಡಿ ಈ ಹಿಂದೆ ಹೋಬಳಿ ಘಟಕಕ್ಕೆ ಸೀಮಿತವಾಗಿದ್ದ ಬಿಜೆಪಿ ಇಂದು ವಿಸ್ತಾರವಾಗಿ ಬೆಳೆಯುತ್ತಿದೆ. ಬೂತ್ ಸಮಿತಿಗಳ ಪಕ್ಷ ಸಂಘಟಿಸಲಾಗುತ್ತಿತ್ತು, ಬಳಿಕ ಮೋರ್ಚಾಗಳನ್ನು ರೂಪಿಸಲಾಯಿತು, ಇದೀಗ ಕಾರ್ಯದ ವಿಸ್ತಾರಕ್ಕಾಗಿ ವಿವಿಧ ಕ್ಷೇತ್ರಗಳನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಪ್ರಕೋಷ್ಟಗಳನ್ನು ರಚನೆ ಮಾಡಲಾಗಿದೆ ಎಂದರು.

ಪ್ರಕೋಷ್ಟಗಳ ಪದಾಧಿಕಾರಿಗಳು ಕೇವಲ ವಿಸಿಟಿಂಗ್ ಕಾರ್ಡ್‌ಗೆ ಸೀಮಿತಗೊಳ್ಳದೇ ಸಮುದಾಯಗಳನ್ನು ಜೋಡಣೆ ಮಾಡುವ ಕೆಲಸ ಮಾಡಬೇಕು, ಸಮುದಾಯದಲ್ಲಿರುವ ಸಮಸ್ಯೆಗಳಿಗೆ ಗುರುತಿಸಿ ಪರಿಹಾರ ದೊರಕಿಸಿಕೊಡುವ ನೇತೃತ್ವವನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಜೆಪಿ ಅಧಿಕಾರ ಎಂಬುದು ಸಾಧನವಷ್ಟೇ ಈ ಮೂಲಕ ಭಾರತಕ್ಕೆ ಬಲ ತುಂಬುವ ಕೆಲಸವನ್ನು ಪ್ರಕೋಷ್ಟಗಳು ಮಾಡಬೇಕಿದೆ. ದೇಶದಲ್ಲಿ ೧೩ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಉಳಿದೆಡೆ ಮಿತ್ರಪಕ್ಷಗಳು ಆಡಳಿತ ನಡೆಸುತ್ತಿವೆ. ೪ ಪೀಳಿಗೆಯ ಪರಿಶ್ರಮದಿಂದಾಗಿ ಇಂದು ಬಿಜೆಪಿ ನೆಲೆ ವಿಸ್ತಾರಗೊಂಡಿದೆ ಅನೇಕ ನಾಯಕರು ಪಕ್ಷ ಸಂಘಟನೆಗೆ ದುಡಿದಿದ್ದಾರೆ ಎಂದು ಸ್ಮರಿಸಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜನಪರವಾದ ಯೋಜನೆಗಳನ್ನು ರೂಪಿಸಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಉಜ್ವಲ, ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ, ಬಡ ಎಲ್ಲಾ ವರ್ಗದವರಿಗೆ ಶೌಚಾಲಯ ನಿರ್ಮಾಣ, ಕೋವಿಡ್‌ನಿಂದ ಮೃತಪಟ್ಟ ಅನಾಥ ಮಕ್ಕಳ ರಕ್ಷಣೆ, ಸೇರಿದಂತೆ ಅನೇಕ ಯೋಜನೆಗಳ ಮೂಲಕ ದೇಶವನ್ನು ಸಮೃದ್ಧದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಕೊಂಡಾಡಿದರು.

ಈ ಸಂದರ್ಭದಲ್ಲಿ ಪ್ರಕೋಷ್ಟದ ರಾಜ್ಯ ಸಂಚಾಲಕ ಭಾನುಪ್ರಕಾಶ್, ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್, ಸಂಚಾಲಕ ಶ್ರೀನಿವಾಸ್, ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಎಂ.ಕೆ.ಪ್ರಾಣೇಶ್, ಜಿಲ್ಲಾ ಮುಖಂಡರಾದ ರಾಜಪ್ಪ, ರವೀಂದ್ರಬೆಳವಾಡಿ, ಹೆಚ್.ಡಿ ತಮ್ಮಯ್ಯ, ರಾಮಸ್ವಾಮಿ, ದೇವರಾಜ್‌ಶೆಟ್ಟಿ, ಮಹೇಶ್, ಮಧುಕುಮಾರ್ ರಾಜ್ ಅರಸ್, ದೇವಾನಂದ್, ಈಶ್ವರಹಳ್ಳಿ ಮಹೇಶ್, ಕೆ.ಪಿ. ವೆಂಕಟೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist