ರಾಜ್ಯದಲ್ಲಿ ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ..!
ಕರ್ನಾಟಕದಲ್ಲಿ ಮುಂಗಾರುಚುರುಕುಗೊಳ್ಳುತ್ತಿದ್ದು ಇಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜೂನ್ 9ರವರೆಗೆ ಮಳೆಯಾಗಲಿದೆ.
ಶಿರಾಲಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಪುತ್ತೂರು, ಶಿರಹಟ್ಟಿ, ಉಪ್ಪಿನಂಗಡಿ, ಗುಂಡ್ಲುಪೇಟೆ, ಗೋಕರ್ಣ, ಚನ್ನಪಟ್ಟಣದಲ್ಲಿ ಮಳೆಯಾಗಿದೆ. ಕುಮಟಾ, ಹರಪನಹಳ್ಳಿ, ಕದ್ರಾ, ಧರ್ಮಸ್ಥಳ, ಮಾಣಿ, ಕಾರವಾರ, ಕುಂದಗೋಳ, ಬೆಳ್ಳಟ್ಟಿ, ಸೋಮವಾರಪೇಟೆ, ಅಂಕೋಲಾ, ಹೊನ್ನಾವರ, ಹಾರಂಗಿ, ಎಚ್ಡಿ ಕೋಟೆ, ಹುಂಚದಕಟ್ಟೆ, ಕಳಸ, ಬೆಳ್ತಂಗಡಿ, ಸಿದ್ದಾಪುರ, ಸವಣೂರು, ಶಿಗ್ಗಾಂವ್, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ಮೈಸೂರಿನಲ್ಲಿ ಮಳೆಯಾಗಿದೆ.
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಾಗಲಕೋಟೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.