ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಅನ್‌ಲಾಕ್‌ ಗೆ ಸಿದ್ಧತೆ ನಡೆಸಿದ ರಾಜ್ಯ ಸರ್ಕಾರ.

Twitter
Facebook
LinkedIn
WhatsApp
ರಾಜ್ಯದಲ್ಲಿ ಮತ್ತೊಂದು ಸುತ್ತಿನ ಅನ್‌ಲಾಕ್‌ ಗೆ ಸಿದ್ಧತೆ ನಡೆಸಿದ ರಾಜ್ಯ ಸರ್ಕಾರ.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಅನ್‌ಲಾಕ್‌ ಜಾರಿ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಹೀಗಾಗಿ ಅನ್‌ ಲಾಕ್‌ 4.0ರಲ್ಲಿ ನೈಟ್‌ ಕರ್ಪ್ಯೂ ರದ್ದಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಸದ್ಯ ಜಾರಿಯಲ್ಲಿರುವ ಆನ್‌ಲಾಕ್‌ 3.0 ಜುಲೈ 19ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ಅನ್‌ಲಾಕ್‌ ತೆರವು ಮಾಡಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಬಸ್‌ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಮಾಲ್‌, ಬಾರ್‌, ಹೋಟೆಲ್‌, ರೆಸ್ಟೋರೆಂಟ್‌, ಖಾಸಗಿ ಕಚೇರಿ, ದೇವಸ್ಥಾನ ಸೇರಿದಂತೆ ಹಲವು ಸೇವೆಗಳಿಗೆ ಅವಕಾಶವನ್ನು ನೀಡಲಾಗಿದೆ. ಆದ್ರೆ ಪಬ್‌ಗೆ ಮಾತ್ರವೇ ಅವಕಾಶ ದೊರಕಿಲ್ಲ. ಹೀಗಾಗಿ ಮುಂದಿನ ಅನ್‌ಲಾಕ್‌ ನಲ್ಲಿ ಪಬ್‌ ತೆರೆಯುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಪ್ರಸ್ತುತ ರಾತ್ರಿ 9 ಗಂಟೆಯಿಂದ ನೈಟ್‌ ಕರ್ಪ್ಯೂ ಜಾರಿಯಲ್ಲಿದೆ. ಆದರೆ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನೈಟ್‌ಕರ್ಪ್ಯೂ ಗೆ ಸಂಪೂರ್ಣ ಬ್ರೇಕ್‌ ಹಾಕುವ ಸಾಧ್ಯತೆಯಿದೆ. ಇನ್ನು ಸಿನಿಮಾ ಶೂಟಿಂಗ್‌ ಗೆ ಅವಕಾಶವನ್ನು ನೀಡಲಾಗಿದ್ದರೂ ಕೂಡ ಚಿತ್ರಮಂದಿರ ತೆರೆಯಲು ಅವಕಾಶ ದೊರಕಿರಲಿಲ್ಲ. ಈ ನಿಟ್ಟಿನಲ್ಲಿಯೂ ಸರಕಾರ ಚಿಂತನೆಯನ್ನು ನಡೆಸಿದೆ.

ರಾಜ್ಯದಲ್ಲಿ ಸಂಪೂರ್ಣವಾಗಿ ಅನ್‌ಲಾಕ್‌ ಮಾಡಿದ್ರೂ ಕೂಡ ಶಾಲೆಗಳನ್ನು ಸದ್ಯಕ್ಕೆ ಆರಂಭಿಸುವ ಚಿಂತನೆ ಸರಕಾರದ ಮುಂದಿಲ್ಲ. ಒಂದೆಡೆ ಡೆಲ್ಟಾ ಫ್ಲಸ್‌, ಇನ್ನೊಂದೆಡೆ ಜಿಕಾ ವೈರಸ್‌ ಭೀತಿ ರಾಜ್ಯವನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿಯೂ ರಾಜ್ಯ ಸರಕಾರ ಯಾವೆಲ್ಲಾ ಸೇವೆಗಳಿಗೆ ವಿನಾಯಿತಿಯನ್ನು ನೀಡಬಹುದು ಅನ್ನೋ ನಿಟ್ಟಿನಲ್ಲಿ ಯೋಚಿಸುತ್ತಿದೆ.

ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಸೋಂಕಿನ ಜೊತೆಗೆ ಡೆಲ್ಟಾ ಫ್ಲಸ್‌, ಜಿಕಾ ವೈರಸ್‌ ಸೋಂಕಿನ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು