ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ ಚುನಾವಣೆ: ಸಿದ್ದು ಭೇಟಿ ಮಾಡಿ ಬೆಂಬಲ ಕೋರಲಿರುವ ಎಚ್ ಡಿ ರೇವಣ್ಣ

Twitter
Facebook
LinkedIn
WhatsApp
ರಾಜ್ಯಸಭೆ ಚುನಾವಣೆ: ಸಿದ್ದು ಭೇಟಿ ಮಾಡಿ ಬೆಂಬಲ ಕೋರಲಿರುವ ಎಚ್ ಡಿ ರೇವಣ್ಣ
 

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಅವರೇ ಮಾಹಿಚಿ ನೀಡಿದ್ದು, ‘ಸಿದ್ದರಾಮಯ್ಯನವರ ಉತ್ತಮ ಸ್ನೇಹಿತರಲ್ಲಿ ತಾವೂ ಒಬ್ಬರಾಗಿದ್ದು, ಇನ್ನೊಂದು ಜಾತ್ಯತೀತ ಪಕ್ಷದ ಬೆಂಬಲ ಕೋರುವುದರಲ್ಲಿ ತಪ್ಪೇನಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

 

ಅಂತೆಯೇ ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ನೆನಪಿಸಿಕೊಂಡ ಹೆಚ್.ಡಿ.ರೇವಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಿರಿಯ ರಾಜಕೀಯ ನಾಯಕರು ಹಲವು ಸಂದರ್ಭಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಜಾತ್ಯತೀತ ಪಕ್ಷದ ನಾಯಕರೊಂದಿಗೆ ಕೈಜೋಡಿಸಿದ್ದಾರೆ ಎಂದರು. ಅಲ್ಲದೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಬಿ.ಕೆ.ಹರಿಪ್ರಸಾದ್ ಅವರನ್ನು ರೇವಣ್ಣ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಚ್.ಡಿ.ರೇವಣ್ಣ, ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದರಿಂದ ಮತ ಕೇಳುವ ನೈತಿಕ ಹಕ್ಕು ಬಿಜೆಪಿ ನಾಯಕರಿಗೆ ಇಲ್ಲ. ಇತ್ತೀಚೆಗೆ ಹಾಸನದಲ್ಲಿ ನಡೆದ ಸಿಎಂಸಿ ಕೌನ್ಸಿಲರ್ ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್‌ರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಅಪರಾಧಗಳನ್ನು ನಿಯಂತ್ರಿಸುವಲ್ಲಿ ಇಬ್ಬರೂ ವಿಫಲರಾಗಿದ್ದಾರೆ. ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ