ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಧಿಕಾ ಪಂಡಿತ್​ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರ ಆಗಬಹುದು; ಮೊದಲೇ ತಿಳಿಸಿದ ನಟಿ

Twitter
Facebook
LinkedIn
WhatsApp
MV5BNTk1OTUxMzIzMV5BMl5BanBnXkFtZTcwMzMxMjI0Nw@@. V1 1 8

ನಟಿ ರಾಧಿಕಾ ಪಂಡಿತ್​ (Radhika Pandit) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಫ್ಯಾನ್ಸ್​ ಜೊತೆ ರಾಧಿಕಾ ಪಂಡಿತ್​ ಹುಟ್ಟುಹಬ್ಬ (Radhika Pandit Birthday) ಆಚರಿಸಿಕೊಳ್ಳುತ್ತಾರೆ. ಆದರೆ ಈ ವರ್ಷ ಅವರು ಮನೆಯಲ್ಲಿ ಇರುವುದಿಲ್ಲ. ಈ ವಿಚಾರವನ್ನು ಜನ್ಮದಿನಕ್ಕೂ ಒಂದು ದಿನ ಮುನ್ನ ಅವರು ತಿಳಿಸಿದ್ದಾರೆ. ಮಾರ್ಚ್​ 7ರಂದು ರಾಧಿಕಾ ಪಂಡಿತ್​ ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳು (Radhika Pandit Fans) ಅವರ ಮನೆ ಬಳಿ ಜಮಾಯಿಸುತ್ತಾರೆ. ಹಾಗಾಗಿ ಮುಂಚಿತವಾಗಿಯೇ ರಾಧಿಕಾ ಪಂಡಿತ್​ ಅವರು ಮಾಹಿತಿ ನೀಡಿದ್ದಾರೆ. ಈ ವರ್ಷ ಮನೆಯಿಂದ ದೂರ ತೆರಳಿ ಬರ್ತ್​ಡೇ ಆಚರಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

May be an image of 1 person

ನಟನೆಯಿಂದ ರಾಧಿಕಾ ಪಂಡಿತ್​ ದೂರ ಉಳಿದುಕೊಂಡಿದ್ದಾರೆ. ಆದರೆ ಅವರು ಅಭಿಮಾನಿಗಳ ಸಂಪರ್ಕ ಕಡಿದುಕೊಂಡಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ದಿನಚರಿ ಬಗ್ಗೆ ಆಗಾಗ ಅಪ್​ಡೇಟ್​ ನೀಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಅವರು ಈ ವರ್ಷದ ತಮ್ಮ ಬರ್ತ್​ಡೇ ಪ್ಲ್ಯಾನ್​ ಬಗ್ಗೆ ತಿಳಿಸಿದ್ದಾರೆ. ಇದರಿಂದ ಕೆಲವರಿಗೆ ಬೇಸರ ಆಗಿದೆ.

May be an image of 1 person

‘ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್​ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್​ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು’ ಎಂದು ರಾಧಿಕಾ ಪಂಡಿತ್​ ಪೋಸ್ಟ್​ ಮಾಡಿದ್ದಾರೆ.

No photo description available.

ರಾಧಿಕಾ ಪಂಡಿತ್​ ಹಂಚಿಕೊಂಡಿರುವ ಈ ಪೋಸ್ಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಮುಂಚಿತವಾಗಿ ಎಲ್ಲರೂ ಬರ್ತ್​ಡೇ ವಿಶ್​ ತಿಳಿಸುತ್ತಿದ್ದಾರೆ. ರಾಧಿಕಾ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ಸದ್ಯಕ್ಕೆ ರಿವೀಲ್​ ಆಗಿಲ್ಲ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಅನೇಕ ಕಡೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.

No photo description available.

ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಕನ್ನಡ ಚಿತ್ರರಂಗದಲ್ಲಿ ಕ್ಯೂಟ್​ ಕಪಲ್​ ಎನಿಸಿಕೊಂಡಿದ್ದಾರೆ. ಕಿರುತೆರೆಯಿಂದ ಒಟ್ಟಿಗೆ ಶುರುವಾದ ಅವರ ಜರ್ನಿ, ಸಿನಿಮಾಗಳಲ್ಲೂ ಮುಂದುವರಿಯಿತು. ಬಳಿಕ ರಿಯಲ್​ ಲೈಫ್​ನಲ್ಲಿಯೂ ಅವರಿಬ್ಬರು ಜೋಡಿಯಾದರು. ಈ ದಂಪತಿಗೆ ಆರ್ಯಾ ಮತ್ತು ಯಥರ್ವ್​ ಎಂಬ ಮಕ್ಕಳು ಇದ್ದಾರೆ. ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್​ ಬ್ಯುಸಿ ಆಗಿದ್ದಾರೆ.

No photo description available.

ರಾಧಿಕಾ ಪಂಡಿತ್​ ಅವರು ಮೊದಲಿನಂತೆಯೇ ನಟನೆಯಲ್ಲಿ ಆ್ಯಕ್ಟೀವ್​ ಆಗಬೇಕು ಎಂಬುದು ಅಭಿಮಾನಿಗಳ ಆಸೆ. ಆದಷ್ಟು ಬೇಗ ಅವರು ಹೊಸ ಚಿತ್ರ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

May be an image of 2 people, people sitting, people standing and sky

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ