ಮಂಗಳವಾರ, ಮೇ 7, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ ಮೋದಿ ಶುಭಾಶಯ ಕೋರದ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ!!

Twitter
Facebook
LinkedIn
WhatsApp
ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ ಮೋದಿ ಶುಭಾಶಯ ಕೋರದ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ!!

ನವದೆಹಲಿ: ಸಾಮಾನ್ಯವಾಗಿ ನಾಯಕರುಗಳ ಜನ್ಮದಿನಕ್ಕೆ ಮರೆಯದೇ ಶುಭಾಷಯ ಕೋರುವ ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರ ಹುಟ್ಟಿದ ದಿನಕ್ಕೆ ಶುಭಾಷಯ ತಿಳಿಸಿಲ್ಲ. ಎಲ್ಲರಿಗೂ ಟ್ವೀಟ್‌ ಮೂಲಕ ಶುಭ ಆರೈಕೆ ಬಯಸುತ್ತಿದ್ದ ಮೋದಿ, ಟ್ವೀಟ್‌ನಲ್ಲಿಯೂ ಯೋಗಿಗೆ ಶುಭಕೋರಿಲ್ಲ. ಇದು ಹಲವು ರೀತಿಯ ಅನುಮಾನ, ಗೊಂದಲಗಳಿಗೆ ಕಾರಣವಾಗಿದೆ.
ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ. ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್ ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು