ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಹುಲ್ ಗಾಂಧಿ ಚಿಕ್ಕ ಮಕ್ಕಳಂತೆ ವರ್ತಿಸುತ್ತಾರೆ. ಅವರ ಪಿಎ ಹಾಗೂ ಭದ್ರತಾ ಸಿಬ್ಬಂದಿ ಪಕ್ಷದ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಗಂಭೀರ ಆರೋಪ ಮಾಡಿದ ಗುಲಾಂ ನಬಿ ಅಜಾದ್ !!

Twitter
Facebook
LinkedIn
WhatsApp
ರಾಹುಲ್ ಗಾಂಧಿ ಚಿಕ್ಕ ಮಕ್ಕಳಂತೆ ವರ್ತಿಸುತ್ತಾರೆ. ಅವರ ಪಿಎ ಹಾಗೂ ಭದ್ರತಾ ಸಿಬ್ಬಂದಿ ಪಕ್ಷದ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಗಂಭೀರ ಆರೋಪ ಮಾಡಿದ ಗುಲಾಂ ನಬಿ ಅಜಾದ್ !!

ನವದೆಹಲಿ (ಆ.26): ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಐದು ಪುಟಗಳ ರಾಜೀನಾಮೆ ಪತ್ರವನ್ನು ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರವಾನಿಸಿದ್ದು, ಇದರಲ್ಲಿ ಇಂದು ಕಾಂಗ್ರೆಸ್ ಪಕ್ಷ ಈ ಸ್ಥಿತಿಯಲ್ಲಿರುವ ಕಾರಣ ರಾಹುಲ್‌ ಗಾಂದಿ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ದಿನದಿಂದ ಹೊರಬೀಳುವವರೆಗಿನ ಪಯಣದ ಬಗ್ಗೆ ಇದರಲ್ಲಿ ವಿಸ್ತ್ರತವಾಗಿ ಬರೆದಿದ್ದಾರೆ. ರಾಹುಲ್‌ ಗಾಂಧಿ ರಾಜಕೀಯಕ್ಕೆ ಪ್ರವೇಶ ಪಡೆದ ದಿನದಿಂದ ಅಥವಾ 2013ರ ಜನವರಿಯಲ್ಲಿ ಅವರನ್ನು ನೀವು ಉಪಾಧ್ಯಕ್ಷರಾಗಿ ನೇಮಕ ಮಾಡಿದ ದಿನದಿಂದ, ಈ ಹಿಂದೆ ಪಕ್ಷದಲ್ಲಿದ್ದ ಸಂಪೂರ್ಣ ಸಲಹಾ ವಿಧಾನವನ್ನು ಕೆಡವಿ ಹಾಕಲಾಯಿತು ಎಂದು ಗುಲಾಂ ನಬಿ ಅಜಾದ್‌ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದು, ಇಂದಿನ ಎಲ್ಲಾ ಸ್ಥಿತಿಗೆ ರಾಹುಲ್‌ ಗಾಂಧಿ ಹಾಗೂ ಅವರ ಚಿಕ್ಕಮಕ್ಕಳಂಥ ವರ್ತನೆಯೇ ಕಾರಣ ಎಂದು ಆರೋಪ ಮಾಡಿದ್ದಾರೆ.

ರಾಹುಲ್‌ ಅನನುಭವಿಗಳ ಮಾತು ಕೇಳ್ತಾರೆ: ಗುಲಾಂ ನಬಿ ಆಜಾದ್ ತಮ್ಮ ಪತ್ರದಲ್ಲಿ ರಾಹುಲ್ ಗಾಂಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ತಮ್ಮ ಸುತ್ತ ಅನನುಭವಿ ಜನರನ್ನು ಇಟ್ಟುಕೊಂಡು ಹಿರಿಯ ನಾಯಕರನ್ನು ಬದಿಗೊತ್ತುತ್ತಾರೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆಯೂ ರಾಹುಲ್ ಗಾಂಧಿ ಅರೆಕಾಲಿಕ ರಾಜಕಾರಣಿ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆಯೂ ಹಾರ್ದಿಕ್ ಪಟೇಲ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರು ಸಮಯ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅನ್ನು ನಡೆಸುತ್ತಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ಇಚ್ಛಾಶಕ್ತಿ ಮತ್ತು ಸಾಮರ್ಥ್ಯವನ್ನು ಕಳೆದುಕೊಂಡಿದೆ ಎಂದು ಗುಲಾಂ ನಬಿ ಆಜಾದ್ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

 ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆ ಆರಂಭಿಸಿದ ಬಗ್ಗೆ ಬರೆದಿರುವ ಆಜಾದ್, ‘ಭಾರತ್ ಜೋಡೋ ಯಾತ್ರೆ’ ಪ್ರಾರಂಭಿಸುವ ಮೊದಲು ಪಕ್ಷದ ನಾಯಕತ್ವವು ‘ಕಾಂಗ್ರೆಸ್ ಜೋಡೋ ಯಾತ್ರೆ’ ಮಾಡಬೇಕಿತ್ತು ಎಂದು ಬರೆದಿದ್ದಾರೆ.

ಪ್ರಧಾನಿಯ ಸುಗ್ರೀವಾಜ್ಞೆ ಹರಿದಿದ್ದು ಅವರ ಬಾಲಿಶ ವರ್ತನೆ:  ದುರದೃಷ್ಟವಶಾತ್, ರಾಹುಲ್ ಗಾಂಧಿಯವರ ರಾಜಕೀಯ ಪ್ರವೇಶದ ನಂತರ, ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಮಾಡಿದಾಗ, ಅವರು ಕಾಂಗ್ರೆಸ್ ಕೆಲಸ ಮಾಡುವ ಮಾರ್ಗವನ್ನು ಮುಕ್ತಾಯ ಮಾಡಿದರು. ಅವರು ಇಡೀ ಸಲಹಾ ವ್ಯವಸ್ಥೆಯನ್ನು ನಾಶಪಡಿಸಿದರು. ಇದರೊಂದಿಗೆ ಪ್ರಧಾನಿ ಹೊರಡಿಸಿದ ಸುಗ್ರೀವಾಜ್ಞೆಯನ್ನು ರಾಹುಲ್ ಹರಿದು ಹಾಕಿರುವುದು ಅವರ ಬಾಲಿಶ ವರ್ತನೆಯನ್ನು ತೋರಿಸುತ್ತದೆ. ಇದು 2014ರಲ್ಲಿ ಪಕ್ಷದ ಸೋಲಿಗೆ ಕಾರಣವಾಯಿತು.

 ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದಂತೆ ಗುಲಾಂ ನಬಿ ಆಜಾದ್ ಗಾಂಧಿ ಕುಟುಂಬವನ್ನು ಗುರಿಯಾಗಿಸಿದ್ದಾರೆ. ಯಾವುದೇ ಮಟ್ಟದಲ್ಲಿ ಸಂಘಟನೆಯಲ್ಲಿ ಎಲ್ಲಿಯೂ ಚುನಾವಣೆ ನಡೆದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.


ಆಜಾದ್ ತಮ್ಮ ಪತ್ರದಲ್ಲಿ ರಾಹುಲ್ ಆಗಮನದೊಂದಿಗೆ ಚರ್ಚೆಯ ಸಂಪ್ರದಾಯವನ್ನು ಕೊನೆಗೊಳಿಸಿದ್ದಾರೆ. ಇದರೊಂದಿಗೆ 2019ರ ಸೋಲಿನ ನಂತರ ಪಕ್ಷದ ಸ್ಥಿತಿ ಹದಗೆಟ್ಟಿದೆ ಎಂದ ಅವರು, ರಾಹುಲ್ ಗಾಂಧಿ ಸಿಟ್ಟಿಗೆದ್ದು ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟು ನಂತರ ಸಿಡಬ್ಲ್ಯುಸಿಯಿಂದ ನಿಮ್ಮನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಿದರೂ ಈವರೆಗೂ ನೀವು ಕೆಲಸ ಮಾಡುತ್ತಿದ್ದೀರಿ. ಇಂದಿನವರೆಗೆ ನೀವು ಹಂಗಾಮಿ ಅಧ್ಯಕ್ಷರಾಗಿ ಉಳಿದುಕೊಂಡಿದ್ದೀರಿ.

 

ಇಂದು ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮಾದರಿಯಲ್ಲಿ ನಡೆಯುತ್ತಿದೆ ಎಂದು ಗುಲಾಂ ನಬಿ ಆಜಾದ್ ಆರೋಪಿಸಿದರು. ರಾಹುಲ್ ಗಾಂಧಿ ಅವರ ಪಿಎ ಮತ್ತು ಭದ್ರತಾ ಸಿಬ್ಬಂದಿ ಪಕ್ಷದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಹುಲ್ ನಾಯಕತ್ವದಲ್ಲಿ 49 ವಿಧಾನಸಭಾ ಚುನಾವಣೆಗಳಲ್ಲಿ 39 ರಲ್ಲಿ ಸೋಲು ಕಂಡಿದ್ದೇವೆ
ಎಂದು ಪತ್ರದಲ್ಲಿ ಅವರು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist