ಶನಿವಾರ, ಡಿಸೆಂಬರ್ 21, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

Twitter
Facebook
LinkedIn
WhatsApp
Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.

NAYAN BAKERY

ಬಿಗ್ ಬಾಸ್ ಕನ್ನಡ 9’ರ  ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರು ‘ಜೈ’ (Jai Film) ಎಂಬ ತುಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ (Adhvithi Shetty) ಎಂಟ್ರಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ತುಳು ಸಿನಿಮಾದಲ್ಲಿ ನಟಿಸುತ್ತಿರುವ ಖುಷಿಯನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಜೈ’ (Jai Film) ಸಿನಿಮಾದಲ್ಲಿ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲೂ ಅವರು ಪಾಲ್ಗೊಂಡಿದ್ದಾರೆ. ನಟನೆಗೆ ಸ್ಕೋಪ್ ಇರುವ ವಿಭಿನ್ನ ಪಾತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಇನ್ನೂ ಅದ್ವಿತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರು. ಮಾತೃ ಭಾಷೆ ತುಳು ಆಗಿದ್ದರೂ ಅವರು ಮೊದಲ ಬಾರಿಗೆ ತುಳು ಭಾಷೆಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಜೈ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ತುಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಕುರಿತು ನಟಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ರೂಪೇಶ್ ಮತ್ತು ಇಡೀ ತಂಡಕ್ಕೆ ನಟಿ ಧನ್ಯವಾದ ತಿಳಿಸಿದ್ದಾರೆ.

ಅಂದಹಾಗೆ, ರೂಪೇಶ್ ಶೆಟ್ಟಿ ಅವರಿಗೆ ತುಳು ಚಿತ್ರರಂಗ ಏನು ಹೊಸದಲ್ಲ. ಅವರು ಮೂಲತಃ ಮಂಗಳೂರಿನವರೇ ಆಗಿದ್ದಾರೆ. ‘ಜೈ’ ಸಿನಿಮಾದ ಜೊತೆಗೆ ಕನ್ನಡದ ‘ಅಧಿಪತ್ರ’ ಸೇರಿದಂತೆ ಹಲವು ಚಿತ್ರಗಳು ಅವರ ಕೈಯಲ್ಲಿವೆ.

’45’ ಸಿನಿಮಾ ಆಡಿಯೋ ಹಕ್ಕು ಆನಂದ್ ಆಡಿಯೋ ಪಾಲು

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ 45 ಸಿನಿಮಾ ಈಗಾಗಲೇ ಒಂದಷ್ಟು ಕಾರಣಕ್ಕೆ ಸುದ್ದಿಯಲ್ಲಿದೆ. 45 ಚಿತ್ರದ ಆಡಿಯೋ ರೈಟ್ಸ್ ಅನ್ನು ಪ್ರತಿಷ್ಟಿತ ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೇ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ‌. ಭಾರಿ ಮೊತ್ತಕ್ಕೆ ಆಡಿಯೋ ‌ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಒಂದೊಂದೆ ಹಾಡುಗಳು ಬಿಡುಗಡೆಯಾಗಲಿದೆ.

ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌, ಉಪೇಂದ್ರ ಮತ್ತು ರಾಜ್‌ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾದ ಕಥೆಯನ್ನು ಅನಿಮೇಷನ್‌ ಮೂಲಕವೇ ನಟರ ಮುಂದೆ ತೆರೆದಿಟ್ಟಿದ್ದಾರೆ.

ಚಿತ್ರದ ಆಡಿಯೋ ಲಾಂಚ್‌ಗೆ ನಿರ್ದೇಶಕರು ಸಜ್ಜಾಗಿದ್ದು, ಅಭಿಮಾನಿಗಳ ಉತ್ಸಾಹವನ್ನು ಹೆಚ್ಚಿಸಿದೆ. ತಾರಾಗಣದಿಂದಲೇ 45 ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಈ ಹಿಂದೆ ಹಲವು ಸದಭಿರುಚಿಯ ಸಿನಿಮಾಗಳನ್ನು ನೀಡಿರುವ ರಮೇಶ್ ರೆಡ್ಡಿ ಮತ್ತೊಂದು ಉತ್ತಮ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಚಿತ್ರ ತಂಡ ಕ್ಲೈಮ್ಯಾಕ್ಸ್ ಸನ್ನಿವೇಶಗಳನ್ನು ಪೂರ್ಣಗೊಳಿಸಿದೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ 30ದಿನಗಳ ಶೂಟಿಂಗ್ ಪೂರ್ಣಗೊಂಡಿದೆ. ಕೌಸ್ತುಭ ಮಣಿ ನಾಯಕಿಯಾಗಿ ನಟಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ. ಸಿನಿಮಾ ಪೋಸ್ಟ್-ಪ್ರೊಡಕ್ಷನ್ ಪ್ರಗತಿಯಲ್ಲಿದ್ದು, 2025 ರ ಆರಂಭದಲ್ಲಿ 45 ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಕಷ್ಟಪಟ್ಟು ನಡೆದು ಬಂದ ದರ್ಶನ್:

ದಿನದಿಂದ ದಿನಕ್ಕೆ ದರ್ಶನ್ ಅವರ ಬೆನ್ನು ನೋವು ಜಾಸ್ತಿ ಆಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ಅವರು ತುಂಬ ಕಷ್ಟಪಟ್ಟು ನಡೆಯುತ್ತಿದ್ದಾರೆ. ಆದಷ್ಟು ಬೇಗ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಅನಾರೋಗ್ಯದ ಕಾರಣದಿಂದ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಜಾಮೀನು ಅರ್ಜಿ ವಿಚಾರಣೆ ಅ.29ಕ್ಕೆ ಮುಂದೂಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್​ಗೆ ಒಂದೆಡೆ ಜೈಲು ವಾಸ, ಇನ್ನೊಂದೆಡೆ ವಿಪರೀತ ಬೆನ್ನು ನೋವು. ಅವರ ಸ್ಥಿತಿ ಯಾರಿಗೂ ಬೇಡದಂತಾಗಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರು ನಡೆದಾಡಲು ಕೂಡ ಕಷ್ಟಪಡುತ್ತಿದ್ದಾರೆ. ಈಗಾಗಲೇ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಸರ್ಜರಿ ಆಗಬೇಕು ಎಂದು ವೈದ್ಯರು ಸಲಹೆ ನೀಡಿದ್ದು, ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist