ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಶೇರಾ ಹಾಗೂ ಕಾರ್ಲ ಸರ್ಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ

Twitter
Facebook
LinkedIn
WhatsApp
photo 1597157639073 69284dc0fdaf 3

ಬಂಟ್ವಾಳ: ದೇಶದ ಭವಿಷ್ಯ ಶಾಲೆಯ ನಾಲ್ಕು ಕೋಣೆಯ ಮಧ್ಯೆ ನಿರ್ಧಾರ ವಾಗುತ್ತದೆ. ಸರಕಾರಿ ಶಾಲೆಗೆ ಸಹಕಾರ ನೀಡಿ ಅಲ್ಲಿ ಕಲಿಯುವ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮ ಕರ್ತವ್ಯ ಎಂದು ರೋಟರಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಹೇಳಿದರು.

ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ಹಾಗೂ ಪೆರ್ನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಾರ್ಲ ಇಲ್ಲಿಗೆ ಕೊಡುಗೆಯಾಗಿ ನೀಡಲಾದ ಕಂಪ್ಯೂಟರ್ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಬಂಟ್ವಾಳ ಗ್ರಾಮೀಣ ಭಾಗದ ಶಾಲೆಗೆ ಸವಲತ್ತು ನೀಡಿರುವುದು ಸಂತೃಪ್ತಿ ನೀಡಿದೆ, ಶಾಲೆಗೆ ನೀಡಲಾದ ಈ ಕೊಡುಗೆಯನ್ನು ಸುಸ್ಥಿಯಲಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಹಾಯಕ ಗವರ್ನರ್ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳು ಭಾಗ್ಯವಂತರು. ಪರಿಣಿತ ಶಿಕ್ಷಕರಿಂದ ಶಿಕ್ಷಣ ಪಡೆಯುವ ಅವಕಾಶದೊಂದಿಗೆ ಶಾಲೆಯ ವಾತಾವರಣ ವಿದ್ಯಾರ್ಥಿಯ ಕಲಿಕೆ ಹಾಗೂ ಬೌದ್ಧಿಕ ವಿಕಾಸಕ್ಕೆ ಪೂರಕವಾಗಿರುತ್ತದೆ ಎಂದರು.

ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮಾತನಾಡಿ ಗ್ರಾಮೀಣ ಭಾಗದ ಶಾಲೆಗಳ ಶೈಕ್ಷಣಿಕ ಅಭಿವೃದ್ದಿಗೆ ಪೂರಕವಾಗುವಂತಹ ಕೊಡುಗೆಗಳನ್ನು ರೋಟರಿ ಕ್ಲಬ್ ಬಂಟ್ವಾಳ ನಿರಂತರವಾಗಿ ನೀಡುತ್ತಾ ಬಂದಿದೆ. ಈ ಶಾಲೆಯ ಶಿಕ್ಷಕರ ಬೇಡಿಕೆಗೆ ಅನುಗುಣವಾಗಿ ಕಂಪ್ಯೂಟರ್ ನೀಡಲಾಗಿದೆ ಎಂದು ತಿಳಿಸಿದರು.
ಶೇರಾ ಸರಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡೇಶಿವಾಲಯ ಗ್ರಾ.ಪಂ. ಅಧ್ಯಕ್ಷ. ಸುರೇಶ್ ಬನಾರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಗಂಗಾಧರ ರೈ ದೂರದರ್ಶನವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಬಂಟ್ವಾಳದ ನಿಯೋಜಿತ ಅಧ್ಯಕ್ಷ ಪ್ರಕಾಶ್ ಬಾಳಿಗ, ಮಾಣಿ ಗ್ರಾ.ಪಂ. ಸದಸ್ಯ ಮೆಲ್ವಿನ್ ಕಿಶೋರ್, ಎಸ್‌ಡಿಎಂಸಿ ಅಧ್ಯಕ್ಷ ಕೇಶವ ಕೆ. ಉಪಾಧ್ಯಕ್ಷ ಹಬೀಬ್, ವಿದ್ಯಾಧರ ರೈ ಪೆರ್ಲಾಪು, ಉದ್ಯಮಿ ನೂತನ್ ಶೇರಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಕೋಮಲಾಂಗಿ ಜಿ. ಸ್ವಾಗತಿಸಿದರು. ಸಹಶಿಕ್ಷಕಿ ಜಯಲಕ್ಷ್ಮಿ ವಂದಿಸಿದರು. ಸುವರ್ಣ ಲತಾ ಕಾರ್ಯಕ್ರಮ ನಿರೂಪಿಸಿದರು.


ಕಾರ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಮುಖ್ಯ ಶಿಕ್ಷಕಿ ಜಾನಕಿ ಸ್ವಾಗತಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ತಿಮ್ಮಪ್ಪ ಕೆ ಪ್ರಾಸ್ತವಿಕವಾಗಿ ಮಾತನಾಡಿದರು. ಗೌರವ ಶಿಕ್ಷಕಿ ಅನುಪಮ ವಂದಿಸಿದರು, ಸಹಶಿಕ್ಷಕಿ ಯಶೋಧ ನಿರೂಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ