ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ರದ್ದುಗೊಳಿಸಲು ಕರವೇ ಆಗ್ರಹ

Twitter
Facebook
LinkedIn
WhatsApp
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿ ರದ್ದುಗೊಳಿಸಲು ಕರವೇ ಆಗ್ರಹ
 

ಚಿಕ್ಕಮಗಳೂರು:  ನಾಡಗೀತೆಯನ್ನು ತಿರುಚಿ ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸಬೇಕು, ಜತೆಗೆ ಸಿದ್ದಾಂತ, ಸಂಘಟನೆಗಳನ್ನು ಬೆಂಬಲಿಸುವ ಪರಿಷ್ಕರಿಸುವ ಪಠ್ಯವನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ ರಾಜ್ಯ ಸರ್ಕಾರ ಪ್ರೋ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಸಿದ್ದಪಡಿಸಿದ್ದ ಶಾಲಾ ಪಠ್ಯಗಳನ್ನು ತರಾತುರಿಯಲ್ಲಿ ಮರುಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಎಂಬುವವರ ನೇತೃತ್ವದಲ್ಲಿ ಪಠ್ಯ ಮರು ಪರಿಷ್ಕರಣಾ ಸಮಿತಿ ರಚಿಸಿದೆ. ಇದರ ಶಿಫಾರಸ್ಸಿನ ಅನ್ವಯ ಭಾಷಾ ವಿಷಯ, ಸಮಾಜವಿಜ್ಞಾನ ಪಠ್ಯಗಳನ್ನು ಖಂಡನಾರ್ಹ ಬದಲಾವಣೆ ತಂದಿದೆ, ಸಿದ್ದಾಂತ, ಸಂಘಟನೆಗಳನ್ನು ಬೆಂಬಲಿಸುವ ಪಠ್ಯವನ್ನು ಅಳವಡಿಸಲಾಗಿದೆ. ಕೂಡಲೇ ಪಠ್ಯದ ಜತೆತೆ ಸಮಿತಿಯನ್ನು ರದ್ದಗೊಳಿಸಬೇಕು ಎಂದು ಆಗ್ರಹಿಸಿದರು.

 

ರಾಷ್ಟ್ರೀಯ ಪಠ್ಯ ಚೌಕಟ್ಟುಗಳು ಮಾರ್ಗಸೂಚಿಯಲ್ಲಿ ಸಂವಿಧಾನ ತತ್ವಗಳಿಗೆ ಅನುಗುಣವಾಗಿ ಸಮಿತಿ ರಚನೆಯಾಗಬೇಕು ಆದರೆ ರಾಜ್ಯ ಸರ್ಕಾರ ನೀತಿಗಳನ್ನು ಗಾಳಿಗೆ ತೂರಿ ಪಕ್ಷ, ಸಿದ್ದಾಂತವೊಂದರ ಅಜೆಂಡಾವನ್ನು ಪಠ್ಯದಲ್ಲಿ ಅಳವಡಿಸಿ ಮಕ್ಕಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಯಾವುದೇ ಶಿಕ್ಷಣ ತಜ್ಞರಿಲ್ಲ, ರೋಹಿತ್ ಚಕ್ರತೀರ್ಥ ಕುವೆಂಪು ರಚಿಸಿರುವ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ್ದಾನೆ. ಅಂತವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಂತಹ ಕಿಡಿಗೇಡಿಯನ್ನು ಸರ್ಕಾರ ಬಂಧಿಸಬೇಕು. ಜತೆಗೆ ಪಠ್ಯವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ದಶರಥರಾಜ್ ಅರಸ್, ಯುವಘಟಕದ ಅಧ್ಯಕ್ಷ ಕುಮಾರ್ ಆರ್.ಶೆಟ್ಟಿ, ಶಶಿಕುಮಾರ್, ನಾಗಲತಾ, ಸಿದ್ದಪ್ಪ, ಶೈಲಾಶ್ರೀ ಸೇರಿದಂತೆ ಮತ್ತಿತರರು ಇದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist