ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಪಾರ್ಟ್ನರ್‌

Twitter
Facebook
LinkedIn
WhatsApp
ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಪಾರ್ಟ್ನರ್‌

ಮುಂಬೈ: ತನ್ನೊಂದಿಗೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ 37 ವಯಸ್ಸಿನ ಮಹಿಳೆಯನ್ನು ಕೊಂದು ಚಾಪೆಯಲ್ಲಿ ಸುತ್ತಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ಸಂಗಾತಿ ಮೇಘಾ ಎಂಬಾಕೆಯನ್ನು ಹಾರ್ದಿಕ್‌ ಶಾ ಕೊಲೆ ಮಾಡಿದ್ದ. ನಂತರ ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯಿಂದ ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದ. ಆದರೆ ರೈಲ್ವೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹಾರ್ದಿಕ್‌ ಶಾ ನಿರುದ್ಯೋಗಿಯಾಗಿದ್ದ. ನರ್ಸ್‌ ಆಗಿದ್ದ ಮೇಘಾ ಅವರೊಂದಿಗೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ. ಇಬ್ಬರೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇಘಾ ಅವರನ್ನು ಕೊಂದ ನಂತರ ಹಾರ್ದಿಕ್ ಮನೆಯ ಕೆಲ ವಸ್ತುಗಳನ್ನು ಮಾರಿ ಹಣದೊಂದಿಗೆ ಪರಾರಿಯಾಗಿದ್ದ. ಈತನ ಬಗ್ಗೆ ಮಾಹಿತಿ ಪಡೆದು ಮಧ್ಯಪ್ರದೇಶದ ನಗ್ಡಾದಲ್ಲಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಮೂರು ವರ್ಷಗಳಿಂದ ಸಂಬಂಧದಲ್ಲಿದ್ದ ಹಾರ್ದಿಕ್ ಮತ್ತು ಮೇಘಾ ಕಳೆದ ಆರು ತಿಂಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಸುಮಾರು ಒಂದು ತಿಂಗಳ ಹಿಂದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದ ಬಗ್ಗೆ ಅವರ ನೆರೆಹೊರೆಯವರು ದೂರು ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ