ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭೆ ಚುನಾವಣೆಯ ಮತಎಣಿಕೆಗೆ ಕ್ಷಣಗಣನೆ; ಯಾರು ಮುಂದಿನ ಪ್ರಧಾನಿ.?

Twitter
Facebook
LinkedIn
WhatsApp
ಲೋಕಸಭೆ ಚುನಾವಣೆಯ ಮತಎಣಿಕೆಗೆ ಕ್ಷಣಗಣನೆ; ಯಾರು ಮುಂದಿನ ಮುಂದಿನ ಪ್ರಧಾನಿ.?
ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Election Vote Counting) ಮಂಗಳವಾರ (ಜೂನ್ 4) ನಡೆಯಲಿದ್ದು, ಈ ಬಾರಿ ಯಾವ ಪಕ್ಷಕ್ಕೆ ಬಹುಮತ ಸಿಗಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ. ಇಂಡಿಯ (INDIA) ಬಣ ಮತ್ತು ಎನ್ಡಿಎ (NDA) ಒಕ್ಕೂಟದ ಮಧ್ಯೆ ಈ ಬಾರಿ ತೀವ್ರ ಪೈಪೋಡಿ ಏರ್ಪಟ್ಟಿತ್ತು. ಈ ಬಾರಿ ಬಿಜೆಪಿಗೆ ಅಧಿಕಾರ ಸಿಗಲು ಬಿಡಬಾರದು ಎಂದು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಒಂದಾಗಿ ಇಂಡಿಯ (I.N.D.I.A) ಬಣವನ್ನು ರಚಿಸಿದ್ದವು. ಆದರೆ, ವಿಪಕ್ಷಗಳ ಒಗ್ಗಟ್ಟಿನ ಹೋರಾಟದ ನಡುವೆಯೂ ಬಿಜೆಪಿ ನೇತೃತ್ವದ ಎನ್ಡಿಎ ಮತ್ತೊಮ್ಮೆ ಸರ್ಕಾರ ರಚಿಸಿ, ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗುವುದು ಖಚಿತವಾಗಿದೆ.
 

ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಗಳು ಎನ್​ಡಿಎ ಭಾರೀ ಬಹುಮತದಿಂದ ಅಧಿಕಾರಕ್ಕೇರಲಿದೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆಯಲಿದೆ. ಚುನಾವಣಾ ಆಯೋಗದ (EC) ಪ್ರಕಾರ, ಎಲ್ಲ 7 ಹಂತಗಳಿಗೆ ಮತದಾನವು ಬೆಳಿಗ್ಗೆ 8ರಿಂದ ಪ್ರಾರಂಭವಾಗಲಿದೆ.

ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಪ್ರಾರಂಭವಾಗಲಿದೆ. ಅಂಚೆ ಮತ ಎಣಿಕೆ ಆರಂಭವಾದ ಅರ್ಧ ಗಂಟೆಯ ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾದ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ತಿಳಿಸಿದ್ದಾರೆ. ಮೊದಲು ಅಂಚೆ ಮತ ಎಣಿಕೆ ಆರಂಭಿಸಬೇಕು ಮತ್ತು ಅಂಚೆ ಮತಪತ್ರಗಳ ಫಲಿತಾಂಶವನ್ನು ಮೊದಲು ಪ್ರಕಟಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ನಿಯೋಗ ಭಾನುವಾರ ಆಯೋಗವನ್ನು ಭೇಟಿ ಮಾಡಿತ್ತು.

ಲೋಕಸಭೆಯ ಎಲ್ಲಾ 543 ಸದಸ್ಯರನ್ನು ಆಯ್ಕೆ ಮಾಡಲು 7 ಹಂತಗಳಲ್ಲಿ ಏಪ್ರಿಲ್ 19ರಿಂದ ಜೂನ್ 1ರವರೆಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಯಿತು. ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ. ಎಣಿಕೆಯ ಫಲಿತಾಂಶಗಳು ECI ವೆಬ್‌ಸೈಟ್‌ನಲ್ಲಿ results.eci.gov.in ಮತ್ತು ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರ ಸಹಾಯವಾಣಿ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದು. ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಿಂದ ಕ್ಷೇತ್ರವಾರು ಅಥವಾ ರಾಜ್ಯವಾರು ಫಲಿತಾಂಶಗಳ ಜೊತೆಗೆ ವಿಜೇತ ಅಥವಾ ಮುಂಚೂಣಿಯಲ್ಲಿರುವ ಅಥವಾ ಹಿಂದುಳಿದ ಅಭ್ಯರ್ಥಿಗಳ ವಿವರಗಳನ್ನು ಕಂಡುಹಿಡಿಯಲು ಬಳಕೆದಾರರು ಲಭ್ಯವಿರುವ ಫಿಲ್ಟರ್ ಅನ್ನು ಬಳಸಬಹುದು.

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ 2019ರಲ್ಲಿ 352 ಸ್ಥಾನಗಳನ್ನು ಗಳಿಸಿದ ದಾಖಲೆಗಿಂತ ತನ್ನ ಸಾಧನೆಯನ್ನು ಸುಧಾರಿಸಲು ಸಜ್ಜಾಗಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬಿಜೆಪಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist