ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಾಯುಕ್ತ ಬಲೆಗೆ ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕಿ

Twitter
Facebook
LinkedIn
WhatsApp
ಲೋಕಾಯುಕ್ತ ಬಲೆಗೆ ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕಿ

ಚಿಕ್ಕಬಳ್ಳಾಪುರ: 8,000 ರೂಪಾಯಿ ಲಂಚ (Bribe) ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ. ನಗರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬಸವೇಶ್ವರ ಫ್ಯೂಯಲ್ ಸೆಂಟರ್‌ನಲ್ಲಿ ಪೆಟ್ರೋಲ್ ಬಂಕ್ ಮೀಟರ್ ನವೀಕರಣಕ್ಕೆ 8,000 ರೂಪಾಯಿ ಲಂಚಕ್ಕೆ ಮಾಲೀಕ ಜಯಸೂರ್ಯ ಬಳಿ ಬೇಡಿಕೆ ಇಟ್ಟಿದ್ದರು.

ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸೆರೆ ಹಿಡಿದು, ಬಂಧಿತ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಮಾಲಾಕಿರಣ್‌ಗೆ ಸೇರಿದ ಬೆಂಗಳೂರಿನ ನಿವಾಸದ ಮೇಲೂ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ದೊರೆಕಿದ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದಾಗಿ ಎಸ್ಪಿ ಪವನ್ ನೆಜ್ಜೂರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ