ಸೋಮವಾರ, ಮೇ 6, 2024
ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವನಿತಾ ಪ್ರೀಮಿಯರ್ ಲೀಗ್ ನ ರೋಚಕ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ಪಾಲಾದ ಟ್ರೋಫಿ

Twitter
Facebook
LinkedIn
WhatsApp
188424 cwwhmzwzpl 1679856655

ಮುಂಬಯಿ: ಭಾರತದ ಮಹಿಳಾ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ ಚೊಚ್ಚಲ ವನಿತಾ ಪ್ರೀಮಿಯರ್‌ ಲೀಗ್‌ ನಲ್ಲಿ ಮುಂಬೈ ಇಂಡಿಯನ್ಸ್‌ ಚಾಂಪಿಯನ್‌ ಆಗಿ ಹೊರ ಹೊಮ್ಮಿದೆ.ಬ್ರೆಬೋರ್ನ್ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ನಡೆದ ರೋಚಕ ಹಣಾಹಣಿಯಲ್ಲಿ ಮೆಗ್‌ ಲ್ಯಾನಿಂಗ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಎದುರು ಹರ್ಮನ್‌ಪ್ರೀತ್‌ ಕೌರ್‌ ನಾಯಕತ್ವದ ಮುಂಬೈ ಇಂಡಿಯನ್ಸ್‌ ತಂಡ 7 ವಿಕೆಟ್ ಅಂತರದ ಗೆಲುವು ಸಾಧಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 12 ರನ್ ಆಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಹೊಡೆದ ಅನುಭವಿಸಿತು. 35 ರನ್ ಆಗುವಷ್ಟರಲ್ಲಿ 3 ನೇ ವಿಕೆಟ್ ಕಳೆದು ಕೊಂಡಿತು. ನಾಯಕಿ ಮೆಗ್‌ ಲ್ಯಾನಿಂಗ್‌ 35 ರನ್ ಗಳಿಸಿ ಔಟಾದರು. ಶಫಾಲಿ ವರ್ಮಾ 11 ರನ್ ಗಳಿಸಿ ಔಟಾದರು. ಆಲಿಸ್ ಕ್ಯಾಪ್ಸೆ 0, ರೋಡ್ರಿಗಸ್ 9, ಮಾರಿಜಾನ್ನೆ ಕಪ್ 18, ಜೋನಾಸೆನ್ 2, ಅರುಂಧತಿ ರೆಡ್ಡಿ 0 ರನ್ ಗಳಿಸಿ ನಿರ್ಗಮಿಸಿದರು. ಆ ಬಳಿಕ ಬಂದ ಶಿಖಾ ಪಾಂಡೆ ಔಟಾಗದೆ 17 ಎಸೆತಗಳಲ್ಲಿ 27 ರನ್ ಗಳಿಸಿದರು. 79 ಕ್ಕೆ 9 ವಿಕೆಟ್ ಕಳೆದುಕೊಂಡು ತಂಡ ನೂರು ರನ್ ದಾಟುವುದು ಕಷ್ಟ ಎನ್ನುವ ಸ್ಥಿತಿಯಲ್ಲಿದ್ದ ವೇಳೆ ಶಿಖಾ ಅವರಿಗೆ ಸಾಥ್ ನೀಡಿದ ರಾಧಾ ಯಾದವ್ ಔಟಾಗದೆ 12 ಎಸೆತಗಳಳ್ಳಿ 27 ರನ್ ಕೊಡುಗೆ ಸಲ್ಲಿಸಿ ತಂಡದ ಬಾಲದಲ್ಲೂ ಬಲವಿದೆ ಅನ್ನುವುದನ್ನು ತೋರಿಸಿಕೊಟ್ಟರು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಕಲೆ ಹಾಕಿತು. ಬಿಗಿ ಬೌಲಿಂಗ್ ದಾಳಿ ನಡೆಸಿದ ಹೇಲಿ ಮ್ಯಾಥ್ಯೂಸ್ ಮತ್ತು 3 ವಿಕೆಟ್ ಕಬಳಿಸಿದರು. ದುಬಾರಿಯಾದರೂ ವಾಂಗ್ 3 ವಿಕೆಟ್ ಪಡೆದರು. ಮೆಲಿ ಕೆರ್ 2 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ 23 ರನ್ ಆಗುವ ವೇಳೆ 2 ವಿಕೆಟ್ ಗಳನ್ನ ಕಳೆದುಕೊಂಡಿತು. ಹೇಲಿ ಮ್ಯಾಥ್ಯೂಸ್ 13, ಯಾಸ್ತಿಕಾ ಭಾಟಿಯಾ 4 ರನ್ ಗಳಿಸಿ ಔಟಾದರು. ಆ ಬಳಿಕ ನ್ಯಾಟ್ ಸ್ಕಿವರ್-ಬ್ರಂಟ್ ಸಮಯೋಚಿತ ಬ್ಯಾಟಿಂಗ್ ನಡೆಸಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ಅಜೇಯ 60 ರನ್ ಗಳು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ,ಹರ್ಮನ್‌ಪ್ರೀತ್ ಕೌರ್ 37 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮೆಲಿ ಕೆರ್ ಔಟಾಗದೆ 14 ರನ್ ಗಳಿಸಿದರು. 19.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ ಜಯಭೇರಿ ಬಾರಿಸಿತು

ಪಂದ್ಯ ಶ್ರೇಷ್ಠ ಆಟಗಾರ್ತಿಯಾಗಿ ನ್ಯಾಟ್ ಸ್ಕಿವರ್-ಬ್ರಂಟ್, ಸರಣಿ ಶ್ರೇಷ್ಠ ಆಟಗಾರ್ತಿಯಾಗಿ ವೆಸ್ಟ್ ಇಂಡೀಸ್ ನ ಹೇಲಿ ಮ್ಯಾಥ್ಯೂಸ್ ( ಮುಂಬೈ ಇಂಡಿಯನ್ಸ್) ಭಾಜನರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ