ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ – ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
Twitter
Facebook
LinkedIn
WhatsApp
ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ (Student) ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ (Head Teacher) ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್ ನಾಯಕ್ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದಾರೆ.
ದೂರು ಬಂದ ಹಿನ್ನೆಲೆಯಲ್ಲಿ ಮನೋಹರ ನಾಯಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕನನ್ನು ಅಮಾನತುಗೊಳಿಸಿದೆ. ಮನೋಹರ್ ನಾಯಕ್ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.