ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಪಕ್ಷ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ

Twitter
Facebook
LinkedIn
WhatsApp
ನಾರಾಯಣಸ್ವಾಮಿ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು.

ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಮಧ್ಯ ಬಿಜೆಪಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ. ಇನ್ನು ವಿಪಕ್ಷ ನಾಯಕನ ಹುದ್ದೆ ರೇಸ್​ನಲ್ಲಿದ್ದ ಸಿಟಿ ರವಿ ಮತ್ತು ರವಿ ಕುಮಾರ್ ಅವರಿಗೆ ನಿರಾಸೆಯಾಗಿದೆ.

ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ನಡೆದಿತ್ತು. ಸಿಟಿ ರವಿ, ಎನ್​ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ನಡುವೆ ಭಾರೀ ಪೈಪೋಟಿ ನಡೆದಿತ್ತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್​ಗೆ ಸಿಟಿ ರವಿ ಅಥವಾ ರವಿ ಕುಮಾರ್​ ಅವರನ್ನ ವಿಪಕ್ಷ ನಾಯಕನ್ನಾಗಿ ಮಾಡಬೇಕೆನ್ನುವುದು ಇತ್ತು. 

ಇತ್ತ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ ಅವರನ್ನೇ ಮಾಡಬೇಕೆಂದು ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ಅಪ್ಪ-ಮಗನ ಬೇಡಿಕೆ ಹೈಕಮಾಂಡ್​ ಗ್ರೀನ್​ ಸಿಗ್ನಲ್ ನೀಡಿದೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಎನ್. ರವಿ ಕುಮಾರ್ ಅವರನ್ನು ಮರುಆಯ್ಕೆ ಮಾಡಿತ್ತು. ಇದರ ಜೊತೆಗೆ, ಅಸೆಂಬ್ಲಿ ಚುನಾವಣೆಯಲ್ಲಿ ಸೋಲುಂಡಿದ್ದ ಸಿ.ಟಿ.ರವಿ ಅವರನ್ನು ಮೇಲ್ಮನೆಗೆ ಕಳುಹಿಸಿತ್ತು.  ಹಿಂದುತ್ವ ಫೈರ್ ಬ್ಯಾಂಡ್ ಎಂದೇ ಗುರುತಿಸಲ್ಪಟ್ಟಿರುವ ಸಿಟಿ ರವಿ ಹಾಗೂ ಎನ್‌ ರವಿಕುಮಾರ್ ನಡುವೆ ಈ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು.  ಛಲವಾದಿ ನಾರಾಯಣ ಸ್ವಾಮಿ ಹೆಸರು ಅಷ್ಟಾಗಿ ಕೇಳಿಬಂದಿರಲಿಲ್ಲ.

ಒಕ್ಕಲಿಗ ಸಮುದಾಯಕ್ಕೆ ಸೇರಿದ ಅಶೋಕ್  ಅವರು ವಿಧಾನಸಭೆ ವಿಪಕ್ಷ ನಾಯಕರಾಗಿದ್ದಾರೆ. ಈಗ ಮತ್ತೆ ಪರಿಷತ್​ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅದೇ ಒಕ್ಕಲಿಗೆ ಸಮುದಾಯಕ್ಕೆ ಸೇರಿದ ಸಿಟಿ ರವಿ ಅವರಿಗೆ ನಿಡಿದರೆ ಹೇಗೆ ಎನ್ನುವ ಪ್ರಶ್ನೆಗಳು ಶುರುವಾಗಿದ್ದವು. ಹೀಗಾಗಿ ಕೊನೆ ಕ್ಷಣದಲ್ಲಿ  ರೇಸ್​ನಲ್ಲಿ ಛಲವಾದಿ ನಾರಾಯಣಸ್ವಾಮಿ ಹೆಸರು ಸಹ ಮುನ್ನೆಲೆಗೆ ಬಂತು. ಆಗ ಕೋಲಿ ಸಮುದಾಯದ ರವಿ ಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಮಾತ್ರ ಛಲವಾದಿ ನಾರಾಯಣಸ್ವಾಮಿ ಅವರನ್ನೇ ವಿಪಕ್ಷ ನಾಯಕನ್ನಾಗಿ ನೇಮಿಕ ಮಾಡಬೇಕೆಂದು ಹೈಕಮಾಂಡ್​ ಬಳಿ ಲಾಬಿ ಮಾಡಿದ್ದರು ಎನ್ನಲಾಗಿದೆ. ಅದರಂತೆ ಇದೀಗ ಹೈಕಮಾಂಡ್​ ಅಪ್ಪ ಮಗನ ಮಾತಿಗೆ ತಲೆದೂಗಿ ಅಂತಿಮವಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನೇ ಪರಿಷತ್​ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.

ಸಿಟಿ ರವಿ ತಮ್ಮ ಆಕ್ರಮಣಕಾರಿ ಮಾತುಗಾರಿಕೆಯ ಮೂಲಕ ಗುರುತಿಸಿಕೊಂಡವರು. ವಿಧಾನಸಭೆಯಲ್ಲೂ ಇದ್ದಾಗಲೂ ಸಿಕ್ಕ ಅವಕಾಶವನ್ನು ಬಳಸಿಕೊಂಡು ಎದುರಾಳಿಯ ವಿರುದ್ಧ ದಾಳಿ ಮಾಡುವಲ್ಲಿ ನಿಸ್ಸೀಮರು. ಅದೇ ರೀತಿಯಲ್ಲಿ ಎನ್‌ ರವಿಕುಮಾರ್‌ ಕೂಡಾ ಚತುರ ಮಾತುಗಾರರು. ಆಡಳಿತ ಪಕ್ಷ ಕಾಂಗ್ರೆಸ್‌ಗೂ ವಿರೋಧ ಪಕ್ಷವನ್ನು ಎದುರಿಸುವುದು ಸವಾಲಾಗಿದೆ. ಈ ನಿಟ್ಟಿನಲ್ಲಿ ಇವರಿಬ್ಬರಲ್ಲಿ ಒಬ್ಬರನ್ನು ವಿಪಕ್ಷ ನಾಯಕನನ್ನು ಮಾಡಿದರೆ ಆಡಳಿತ ಪಕ್ಷವನ್ನು ಇನ್ನಷ್ಟು ಕಟ್ಟಿಹಾಕಬಹುದು ಎನ್ನುವ ಲೆಕ್ಕಾಚಾರ ಕೆಲ ನಾಯಕರಲ್ಲಿ ಇತ್ತು. ಈ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲೂ ಚರ್ಚೆಗಳು ನಡೆದಿದ್ದವು. ಹೀಗಾಗಿ ವಿಧಾನ ಪರಿಷತ್ತಿನಲ್ಲಿ ವಿಪಕ್ಷದ ನಾಯಕರಾಗಿ ಒಂದೋ ಎನ್. ರವಿ ಕುಮಾರ್ ಇಲ್ಲವೇ, ಸಿ.ಟಿ.ರವಿ ಆಯ್ಕೆಯಾಗಬಹುದು ಎಂದೇ ಲೆಕ್ಕಾಚಾರವಾಗಿತ್ತು.

ಕೊನೆಗೂ ಬಿಜೆಪಿ, ವಿಧಾನಪರಿಷತ್ ವಿರೋಧ ಪಕ್ಷ ನಾಯಕನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿದ್ದು, ಇದೀಗ ಪರಿಷತ್ ವಿಪಕ್ಷ ನಾಯಕನನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಇದರಿಂದ ಸಿಟಿ ರವಿ, ಎನ್​ ರವಿ ಕುಮಾರ್​ಗೆ ಹಿನ್ನಡೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist