ಭಾನುವಾರ, ಮೇ 19, 2024
ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶಾಖಪಟ್ಟಣದ ಕೆಮಿಕಲ್‌ ಫ್ಲಾಂಟ್‌ನಲ್ಲಿ ಅನಿಲ ಸೋರಿಕೆ: 178 ಉದ್ಯೋಗಿಗಳು ಅಸ್ವಸ್ಥ

Twitter
Facebook
LinkedIn
WhatsApp
ವಿಶಾಖಪಟ್ಟಣದ ಕೆಮಿಕಲ್‌ ಫ್ಲಾಂಟ್‌ನಲ್ಲಿ ಅನಿಲ ಸೋರಿಕೆ: 178 ಉದ್ಯೋಗಿಗಳು ಅಸ್ವಸ್ಥ
 

ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ 178ಕ್ಕೂ ಹೆಚ್ಚು ಉದ್ಯೋಗಿಗಳು ಅಸ್ವಸ್ಥರಾದ ಘಟನೆ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (Visakhapatnam) ನಡೆದಿದೆ. ವಿಶಾಖಪಟ್ಟಣಂನ ಅಚ್ಯುತಪುರಂನಲ್ಲಿರುವ (Atchutapuram)  ಕೆಮಿಕಲ್‌ ಕಾರ್ಖಾನೆಯಲ್ಲಿ ಈ ಅನಿಲ ಸೋರಿಕೆ ಪ್ರಕರಣ ಸಂಭವಿಸಿದೆ. ಇದು ಪಶುವೈದ್ಯಕೀಯ ಔಷಧಿಗಳ ಕಂಪನಿಯಾದ ಪೋರಸ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್‌ನ (Porus Laboratories Pvt Ltd) ಕೇಂದ್ರ ಸ್ಥಾನವಾಗಿದೆ.  

ರಾಜ್ಯದ ಕೈಗಾರಿಕಾ ಸಚಿವ ಗುಡಿವಾಡ ಅಮರನಾಥ್ (Gudivada Amarnath) ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಪ್ರಸ್ತುತ ಎಲ್ಲಾ ಕಾರ್ಮಿಕರ ಆರೋಗ್ಯ ಸ್ಥಿರವಾಗಿದೆ (ಮತ್ತು) ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಎಂದು ಅನಕಪಲ್ಲಿ ಎಸ್ಪಿ ಗೌತಮಿ ಸಾಲಿ (Anakapalle SP Gautami) ತಿಳಿಸಿದ್ದಾರೆ. ಅನಿಲ ಸೋರಿಕೆಯ ಮೂಲ ಕಾರಣ ಇನ್ನೂ ದೃಢಪಟ್ಟಿಲ್ಲ  ಈ ಬಗ್ಗೆ ಆಂಧ್ರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

 

ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್‌ನಿಂದ ಅನಿಲ ಸೋರಿಕೆಯಾಗಿರಬಹುದು ಎಂದು ಮೊದಲಿಗೆ ಭಾವಿಸಲಾಗಿತ್ತು. ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಆಗಮಿಸಿ ಅನಿಲ ಸೋರಿಕೆಯ ಮೂಲವನ್ನು ಗುರುತಿಸುತ್ತಿವೆ. ಮಧ್ಯಾಹ್ನ 12:30ಕ್ಕೆ ಈ ಘಟನೆ ನಡೆದಿದೆ. ಪೋರಸ್ ಪ್ರೈವೇಟ್ ಲಿಮಿಟೆಡ್ ಹೊರತಾಗಿ ಎರಡು ಉಡುಪು ಕಂಪನಿ ಕಾರ್ಖಾನೆಗಳು ಇದೇ ಪ್ರದೇಶದಲ್ಲಿದ್ದು, ಕ್ಯಾಂಪಸ್‌ನಲ್ಲಿರುವ ಗ್ಯಾಸ್‌ ಸೋರಿಕೆಯ ನಂತರ ಅಲ್ಲಿನ ಸಿಬ್ಬಂದಿ ವಾಂತಿ  ಬಂದಂತೆ ಅನಿಸಲು ಶುರುವಾಗಿದ್ದಾಗಿ ದೂರಿದ್ದಾರೆ. ಅನಾರೋಗ್ಯಕ್ಕೆ ಒಳಗಾದವರಲ್ಲಿ ಹೆಚ್ಚಿನವರು ಕ್ಯಾಂಪಸ್‌ನಲ್ಲಿರುವ ಬ್ರಾಂಡಿಕ್ಸ್ ಕಾರ್ಖಾನೆಗೆ ಸೇರಿದವರಾಗಿದ್ದಾರೆ. 

ಅಸ್ವಸ್ಥರನ್ನು  ಅಚ್ಚುತಪುರಂನ ಎರಡು ಖಾಸಗಿ ಆಸ್ಪತ್ರೆಗಳು ಮತ್ತು ಅನಕಪಲ್ಲಿಯ ಎನ್‌ಟಿಆರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಂಧ್ರಪ್ರದೇಶ (Andhra Pradesh) ಮುಖ್ಯಮಂತ್ರಿ ವೈಎಸ್ ಜಗನ್ ರೆಡ್ಡಿ (YS Jagan Reddy) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸ್ಥಳೀಯ ಸಚಿವರಿಗೆ ಅವರು ಆದೇಶಿಸಿದರು. ಘಟನೆಯ ಕುರಿತು ತನಿಖೆ ನಡೆಸಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಪೋರಸ್ ಲ್ಯಾಬೋರೇಟರೀಸ್‌ನಲ್ಲಿ ಏಪ್ರಿಲ್‌ನಲ್ಲಿ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಆರು ಜನರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿದ್ದರು. ಮೃತರ ಕುಟುಂಬಗಳಿಗೆ ರಾಜ್ಯ ಮತ್ತು ಕಾರ್ಖಾನೆ ಆಡಳಿತದಿಂದ ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಗಾಯಗಳ ಆಧಾರದ ಮೇಲೆ 2 ಲಕ್ಷದಿಂದ 5 ಲಕ್ಷದವರೆಗೆ ಸಿಗಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಆಂಧ್ರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾಥಮಿಕ ತನಿಖೆಯ ಪ್ರಕಾರ ಈ ಸ್ಫೋಟದ ಹಿಂದೆ ಅನಿಯಂತ್ರಿತ ಪ್ರತಿಕ್ರಿಯೆಯ ತಾಪಮಾನದಲ್ಲಿ ಹೆಚ್ಚಿನ ಎಕ್ಸೋಥರ್ಮಿಕ್ ಪ್ರತಿಕ್ರಿಯೆ ಇರುವುದಾಗಿ ಹೇಳಿತ್ತು. ಅಲ್ಲದೇ ಮಾಲಿನ್ಯ ನಿಯಂತ್ರಣ ಮಂಡಳಿ(PCB) ಬಲ್ಕ್ ಡ್ರಗ್ ತಯಾರಿಕಾ ಘಟಕವನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿತ್ತು. ಹೈದರಾಬಾದ್ ಮೂಲದ ಪೋರಸ್ ಲ್ಯಾಬೋರೇಟರೀಸ್  ಔಷಧೀಯ ಮಧ್ಯವರ್ತಿಯಾಗಿದ್ದು, ವಿಶೇಷ ರಾಸಾಯನಿಕಗಳ ತಯಾರಿಕೆಯಲ್ಲಿ ತೊಡಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಐದು ಘಟಕಗಳನ್ನು ಇದು ಹೊಂದಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ