
ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳಕ್ಕೆ ಚಿಂತನೆ
ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.
ಬೆಂಗಳೂರು: ಏಪ್ರಿಲ್ 04ರಂದು ರಾಜ್ಯದಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಹೋಟೆಲ್, ಉಪಾಹಾರ ಮಂದಿರ ಮಾಲೀಕರು ತಿಂಡಿ, ಊಟ, ಟೀ, ಕಾಫಿ ಬೆಲೆಗಳಲ್ಲಿ ಶೇಕಡಾ 10ರಷ್ಟು ಹೆಚ್ಚಳ ಮಾಡಿವೆ. ಇದರ ನಡುವೆ ಈಗ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಟಿಕೆಟ್ ದರ ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.
ದರ ಏರಿಕೆಗೆ ಖಾಸಗಿ ವಾಹನ ಸಂಘಟನೆಗಳ ಚಿಂತನೆ
ದಿನೇದಿನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಶೇಕಡಾ 10ರಷ್ಟು ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮಾಡಲು ಖಾಸಗಿ ವಾಹನ ಸಂಘಟನೆಗಳು ಚಿಂತನೆ ನಡೆಸಿವೆ. ಹಾಗೂ ಪ್ರವಾಸಿ ಟ್ಯಾಕ್ಸಿ ವಾಹನಗಳ ಬಾಡಿಗೆ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. ಬಾಡಿಗೆ ಜಾಸ್ತಿ ಮಾಡದೇ ಹೋದ್ರೆ ಬದುಕೋದು ಕಷ್ಟ ಎಂದು ಕರ್ನಾಟಕ ರಾಜ್ಯ ಖಾಸಗಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ರಾಮಕೃಷ್ಣ ಹೊಳ್ಳ ತಿಳಿಸಿದ್ದಾರೆ.
ಉಕ್ರೇನ್ ರಷ್ಯಾದ ಯುದ್ಧದ ಪರಿಣಾಮ. ಪೆಟ್ರೋಲಿಯಂ ಬೆಲೆ ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಡಿಸೇಲ್ ಬೆಲೆ 10 ರೂ ಜಾಸ್ತಿ ಆಗಿದೆ. ಜೊತೆಗೆ ಬೇರೆ ಬೇರೆ ವಲಯದಲ್ಲೂ ಬೆಲೆ ಏರಿಕೆಯಾಗ್ತಿದೆ. ಟೋಲ್ ದರವೂ ಸಹ ಹೆಚ್ಚಾಗಿದೆ. ಹೀಗಾಗಿ ನಾವೂ ಸಹ ದರ ಏರಿಕೆ ಮಾಡಬೇಕಾಗಿದೆ. ಶೇಕಡಾ 10ರಷ್ಟು ಏರಿಕೆ ಆಗಲೇಬೇಕಾಗಿದೆ. ಡಿಸೇಲ್ ಬೆಲೆ ಏರಿಕೆಯಾಗ್ತಿರೋದನ್ನ ನೋಡಿದ್ರೇ ಮುಂದಿನ ದಿನಗಳಲ್ಲಿ ಟ್ಯಾಕ್ಸಿ ಬಾಡಿಗೆ ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟ್ರಾನ್ಸ್ ಪೋರ್ಟ್ ಬೆಲೆ ಜಾಸ್ತಿಯಾಗೋದು ಅನಿವಾರ್ಯವಾಗಿದೆ. ನಾವೂ ಬೆಲೆ ಏರಿಕೆ ಮಾಡದೇ ಹೋದ್ರೆ ನಮ್ಮ ಉದ್ಯಮ ನಷ್ಟ ಅನುಭವಿಸಬೇಕಾಗುತ್ತೆ ಎಂದಿದ್ದಾರೆ. ಸದ್ಯ ದರ ಏರಿಕೆ ಬಗ್ಗೆ ಈ ವಾರ ಅಥವಾ ಮುಂದಿನ ವಾರ ಸಭೆ ಮಾಡಲು ಅಸೋಸಿಯೇಷನ್ ನಿರ್ಧರಿಸಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist