ಬುಧವಾರ, ಮೇ 1, 2024
ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆ ಮತ್ತು ಬಟ್ಟೆ ಅಂಗಡಿ; ದಂಪತಿ ಸಜೀವ ದಹನ

Twitter
Facebook
LinkedIn
WhatsApp
ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆ ಮತ್ತು ಬಟ್ಟೆ ಅಂಗಡಿ; ದಂಪತಿ ಸಜೀವ ದಹನ

ಯಾದಗಿರಿ (ಮಾ.27): ಯಾದಗಿರಿ ತಾಲೂಕಿನ ಸೈದಾಪುರದಲ್ಲಿರುವ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಅವಘಡದಿಂದಾಗಿ ಅಗ್ನಿ ದುರಂತ ಸಂಭವಿಸಿ ದಂಪತಿಗಳಿಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ರಾಗಯ್ಯ (39) ಹಾಗೂ ರಾಗಯ್ಯ ಪತ್ನಿ ಶಿಲ್ಪ (35) ಮೃತ ದುರ್ದೈವಿಗಳು. ಮೂರು ಅಂತಸ್ತಿನ ಈ ಕಟ್ಟಡದಲ್ಲಿ, ಎರಡು ಅಂತಸ್ತುಗಳನ್ನು ಬಟ್ಟೆ ಅಂಗಡಿಗಾಗಿ ಮೀಸಲಿಡಲಾಗಿತ್ತು. ಮೂರನೇ ಮಹಡಿಯಲ್ಲಿ ದಂಪತಿಗಳು ವಾಸವಿದ್ದರು. 

ಸೋಮವಾರ ಬೆಳಗಿನ ಜಾವ, ಸುಮಾರು 5:00 ಗಂಟೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅವಘಡದಲ್ಲಿ ರಾಗಯ್ಯ ಅವರ ತಂದೆ ತಾಯಿ, ಹಾಗೂ ಪುತ್ರರಿಬ್ಬರನ್ನು ರಕ್ಷಿಸಲಾಗಿದೆ. ಎರಡು ಅಂತಸ್ತಿನ ಬಟ್ಟೆ ಮಳಿಗೆಯಲ್ಲಿ ಬೆಂಕಿ ಹತ್ತಿದ್ದರಿಂದ ಅದನ್ನು ನಂದಿಸುವ ಹರಸಾಹಸ ನಡೆದಿದೆ. ಸಾರ್ವಜನಿಕರು ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆ ಅಗ್ನಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು. ಈ ಭಾಗದ ಪ್ರಮುಖ ಬಟ್ಟೆ ವ್ಯಾಪಾರಿ  ಹಾಗೂ ಅವರ ಪತ್ನಿ ದುರಂತ ಅಂತ್ಯ ಸ್ಥಳೀಯರನ್ನು ಆಘಾತಕ್ಕೀಡಾಗಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನಲೆ ಈ ದುರಂತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಅಶೋಕಯ್ಯ ಕಾಳಬೆಳಗುಂದಿ ಎಂಬವರಿಗೆ ಸೇರಿದ ಮನೆ‌ಯಾಗಿದೆ. ಮನೆಯಲ್ಲಿಯೇ ಬಟ್ಟೆ ಅಂಗಡಿಯಿದೆ. ದಟ್ಟವಾದ ಹೊಗೆ ಆವರಿಸಿದ್ದರಿಂದ ಮನೆಯಿಂದ ಹೊರ ಬರಲು ಮೃತ ದಂಪತಿಗಳು ಪರದಾಟ ನಡೆಸಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ ಮಾಡಿದರೂ ದಂಪತಿಗಳನ್ನು ಜೀವಂತವಾಗಿ ಉಳಿಸಿಕೊಳ್ಳಲಾಗಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ