ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೆರೆಯ ಪರಿಸ್ಥಿತಿ ನಿರ್ವಹಿಸಲು ಮಧ್ಯರಾತ್ರಿಯಲ್ಲೇ ಕಾರ್ಯಾಚರಣೆಗೆ ಇಳಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ.

Twitter
Facebook
LinkedIn
WhatsApp
ಮಡಿಕೇರಿ ಶಾಸಕ ಡಾ. ಮಂತರ್ ಗೌಡ.

ಮಡಿಕೇರಿ: ವಿಧಾನಮಂಡಲ ಅಧಿವೇಶನ ಮುಗಿಸಿದ ಕೂಡಲೇ ಮಡಿಕೇರಿ ಶಾಸಕ ಡಾಕ್ಟರ್ ಮಂತರ್ ಗೌಡ. ನೇರವಾಗಿ ಕುಶಾಲನಗರ ಪುರಸಭೆ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಹಾಗೂ ಸಂತ್ರಸ್ತರ ಜೊತೆಯಲ್ಲಿ ಚರ್ಚಿಸಿ ಅವರುಗಳಿಗೆ ಧೈರ್ಯ ತುಂಬಿದರು.

ಕುಶಾಲನಗರದ ಸಾಯಿ ಬಡಾವಣಿಗೆ ಮಧ್ಯರಾತ್ರಿಯಲ್ಲಿ ನೆರೆ ಪರಿಸ್ಥಿತಿಯನ್ನು ವೀಕ್ಷಿಸಲು ಅವರ ಆಗಮಿಸಿದ್ದು, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಅವರಿಗೆ ಅತ್ಯಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ಹಾಗೂ ತಾತ್ಕಾಲಿಕವಾಗಿ ವಾಸಿಸಲು ಬೇಕಾದ ವ್ಯೆವಸ್ಥೆ, ಆಹಾರ ಪದಾರ್ಥಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಧರ್ಭ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಡಿವೈಎಸ್ಪಿ ಗಂಗಾಧರಪ್ಪ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಆದ ವಿ.ಪಿ ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್ ಹಾಗೂ ಪ್ರಮುಖರು, ಪೋಲೀಸ್ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿರೂರು ಗುಡ್ಡ ಕುಸಿತ: ಶೇ.75ರಷ್ಟು ಅವಶೇಷ ತೆರವು, 6 ಜನರ ಶವ ಪತ್ತೆ, ನಾಲ್ವರಿಗಾಗಿ ಶೋಧ:

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡಕುಸಿತ ಪ್ರಕರಣ ರಕ್ಷಣಾ ಕಾರ್ಯಾಚರಣೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ವರೆಗೂ 6 ಜನರ ಶವ ಪತ್ತೆಯಾಗಿ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಮಂಗಳವಾರ ಗುಡ್ಡಕುಸಿದು ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಮುಚ್ಚಿಹೋಗಿತ್ತು. ಇದೀಗ ಸತತ 4 ದಿನಗಳ ಕಾರ್ಯಾಚರಣೆ ಬಳಿಕ ಈ ವರೆಗೂ ಶೇ.75 ರಷ್ಟು ಅವಶೇಷಗಳನ್ನು ಶುಕ್ರವಾರ ಸಂಜೆ ವೇಳೆಗೆ ತೆರವುಗೊಳಿಸಲಾಗಿದೆ.

ಭಾರತೀಯ ನೌಕಾಪಡೆಯ ಸೀ-ಬರ್ಡ್‌ನ ಆಳವಾದ ಸಮುದ್ರ ಡೈವರ್‌ಗಳು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್) ಗಂಗವಳಿ ನದಿಯ ಕೆಸರು ನೀರನ್ನು ಸ್ಕ್ಯಾನ್ ಮಾಡಿದ ನಂತರ ಶುಕ್ರವಾರ ರಕ್ಷಣಾ ಕಾರ್ಯಾಚರಣೆ ವೇಗ ಪಡೆದಿದೆ.

ಆದರೆ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿದಿದೆ. ನದಿಯು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಕ್ಲಿಷ್ಟಗೊಳಿಸಿದೆ.

ರಾಷ್ಟ್ರೀಯ ಹೆದ್ದಾರಿ 66ಯ ಒಂದು ಭಾಗದಲ್ಲಿ ಮಣ್ಣು, ಕಲ್ಲುಗಳನ್ನು ತೆರವುಗೊಳಿಸಲಾಗಿದೆ. ಈ ಪ್ರದೇಶವು ಇನ್ನೂ ನಿಯಮಿತವಾಗಿ ಭೂಕುಸಿತಕ್ಕೆ ಸಾಕ್ಷಿಯಾಗುತ್ತಿರುವುದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಅನುಮತಿಸಲು ಅಧಿಕಾರಿಗಳು ಇನ್ನೂ ನಿರ್ಧರಿಸಿಲ್ಲ. ಧಾರಾಕಾರ ಮಳೆಯ ನಡುವೆಯೂ ಮಣ್ಣು ತೆರವು ಭರದಿಂದ ಸಾಗಿದ್ದು, ಐಆರ್‌ಬಿ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ.

ಎನ್‌ಡಿಆರ್‌ಎಫ್‌, ಪೊಲೀಸ್ ತಂಡಗಳು ಶೋಧ ಕಾರ್ಯ ಮುನ್ನಡೆಸಿವೆ. ಮಳೆಯಿಂದಾಗಿ ಗುಡ್ಡದಿಂದ ಝರಿಯಂತೆ ನೀರು ಹರಿದುಬರುತ್ತಿದ್ದು, ಮತ್ತೆ ಗುಡ್ಡ ಕುಸಿತ ಭೀತಿ ತಲೆದೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಾಚರಣೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ನಾಲ್ವರಿಗಾಗಿ ಶೋಧ

ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿ 10 ಮಂದಿ ಕಣ್ಮರೆಯಾಗಿದ್ದಾರೆ; ಇವರಲ್ಲಿ 6 ಮಂದಿಯ ಶವಗಳು ಸಿಕ್ಕಿವೆ ಹಾಗೂ ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಶಿರೂರು ಗ್ರಾಮದ ಜಗನ್ನಾಥ್ ನಾಯ್ಕ್ ಮತ್ತು ಸನ್ನಿಗೌಡ ಮತ್ತು ಕೇರಳದ ಟ್ರಕ್ ಚಾಲಕ ಅರ್ಜುನ್ ಎಂಬ ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಶನಿವಾರ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಟ್ರಕ್ ಚಾಲಕನ ಮೊಬೈಲ್ ರಿಂಗ್ ಆಗುತ್ತಿದೆ

ಕೇರಳ ಮೂಲದ ಟ್ರಕ್ ಮಾಲೀಕ ಮುನ್ನಾಫ್ ಶುಕ್ರವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ವಾಹನದಿಂದ ಕೊನೆಯ ಜಿಪಿಎಸ್ ಸ್ಥಳದ ಪ್ರಕಾರ ಅವರ ಒಂದು ಟ್ರಕ್ ಅವಶೇಷಗಳಡಿಯಲ್ಲಿದೆ ಎಂದು ಹೇಳಿದ್ದಾರೆ. ಭೂಕುಸಿತದಲ್ಲಿ ಸಿಲುಕಿರುವ ಟ್ರಕ್ ಚಾಲಕ ಅರ್ಜುನ್ ಅವರ ಕುಟುಂಬ ಸದಸ್ಯರು ಶುಕ್ರವಾರ ಬೆಳಿಗ್ಗೆಯೂ ಅವರ ಮೊಬೈಲ್ ಫೋನ್ ರಿಂಗ್ ಆಗುತ್ತಿದೆ ಎಂದು ಹೇಳಿದ್ದಾರೆ. ಪೊಲೀಸರು ಮೆಟಲ್ ಡಿಟೆಕ್ಟರ್ ಸಹಾಯದಿಂದ ಸ್ಥಳವನ್ನು ಗುರುತಿಸಿದರು. ಆದರೆ, ಅವರ ಸುಳಿವು ಸಿಕ್ಕಿರಲಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist