ಶಾಸಕ ಸ್ಥಾನಕ್ಕೆ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ, ಕಾಂಗ್ರೆಸ್ ಸೇರುವ ಸಾಧ್ಯತೆ!
Twitter
Facebook
LinkedIn
WhatsApp
ಗುಬ್ಬಿ: ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ರಾಜೀನಾಮೆ ಬಳಿಕ ಕಾಂಗ್ರೆಸ್ ಸೇರುವುದಾಗಿ ಈ ಹಿಂದೆಯೇ ಹೇಳಿಕೊಂಡಿದ್ದರು. ಇಂದೇ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಗುಬ್ಬಿಯಲ್ಲಿ ಮಾತನಾಡಿರುವಶ್ರೀನಿವಾಸ್, ಇಂದು ಬೆಂಗಳೂರಿಗೆ ತೆರಳಿ ಸ್ಪೀಕರ್ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿಸುತ್ತೇನೆ. ಕಾಂಗ್ರೆಸ್ನಿಂದ ಟಿಕೆಟ್ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.