ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

Twitter
Facebook
LinkedIn
WhatsApp
ಶಿವ, ಪಾರ್ವತಿ ವೇಷ ಧರಿಸಿ ಹಣದುಬ್ಬರದ ಬಗ್ಗೆ ನಾಟಕ- ಶಿವ ವೇಷಧಾರಿಯ ಬಂಧನ

ದಿಸ್ಪುರ್: ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ಕಾಳಿ ಸಾಕ್ಷ್ಯಚಿತ್ರದ ಪೋಸ್ಟರ್‌ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಇದರ ನಡುವೆಯೇ ಶಿವ-ಪಾರ್ವತಿಯ ವೇಷ ಧರಿಸಿ ಬೀದಿ ನಾಟಕದ ಮೂಲಕ ಪ್ರತಿಭಟನೆ ನಡೆಸಿರುವ ಕಲಾವಿದರ ಮೇಲೆ ಕೇಸ್ ದಾಖಲಾಗಿದೆ. ಈಶ್ವರ ಪಾತ್ರಧಾರಿಯ ಬಂಧನವೂ ಆಗಿದೆ.

ಅಸ್ಸಾಂನ ನಾಗಾಂವ್‌ನಲ್ಲಿ ಇಬ್ಬರು ಶಿವ ಹಾಗೂ ಪಾರ್ವತಿ ದೇವಿಯ ವೇಷ ಧರಿಸಿ ದೇಶದ ಹಣದುಬ್ಬರದ ಬಗ್ಗೆ ನಾಟಕವಾಡಿದ್ದಾರೆ. ಇದು ಹಿಂದೂ ಸನಾತನ ಧರ್ಮದವರ ಭಾವನೆಗೆ ಧಕ್ಕೆ ಉಂಟುಮಾಡಿದೆ ಎಂದು ನಾಗಾಂವ್ ಜಿಲ್ಲೆಯ ಹಿಂದೂ ಪರಿಷತ್ ಹಾಗೂ ಭಜರಂಗದಳ ಆರೋಪಿಸಿ, ತೀವ್ರವಾಗಿ ಖಂಡಿಸಿದೆ.

ಶನಿವಾರ ಸಂಜೆ ನಾಟಕ ಕಲಾವಿದರಾದ ಬಿರಿಂಚಿ ಬೋರಾ ಮತ್ತು ಕರಿಷ್ಮಾ, ಶಿವ ಮತ್ತು ಪಾರ್ವತಿ ವೇಷ ಧರಿಸಿ, ರಸ್ತೆಗಿಳಿದು ಇಂಧನ, ಆಹಾರ ಪದಾರ್ಥ ಹಾಗೂ ಇತರ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿದ್ದಾರೆ. ಇಬ್ಬರೂ ಬೈಕ್‌ನಲ್ಲಿ ನಾಗಾಂವ್‌ನ ಕಾಲೇಜು ಚೌಕ್‌ಗೆ ಆಗಮಿಸಿ, ವಾಹನದಲ್ಲಿ ಇಂಧನ ಖಾಲಿಯಾಗುತ್ತಿರುವ ಬಗ್ಗೆ ನಾಟಕವಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡ ಶಿವ ವೇಷಧಾರಿ, ಸರ್ಕಾರ ಕೇವಲ ಬಂಡವಾಳಶಾಹಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನು ಸ್ಥಳದಲ್ಲಿ ನೆರೆದವರು ಕುತೂಹಲದಿಂದ ನೋಡಿದ್ದಾರೆ ಹಾಗೂ ಪಾತ್ರಧಾರಿಗಳು ಏರುತ್ತಿರುವ ಹಣದುಬ್ಬರವನ್ನು ಪ್ರತಿಭಟಿಸುವಂತೆ ಒತ್ತಾಯಿಸಿದ್ದಾರೆ.

ಇದಾದ ಬಳಿಕ ಬಡಾ ಬಜಾರ್ ಪ್ರದೇಶಕ್ಕೂ ಆಗಮಿಸಿದ ಕಲಾವಿದರು ಇದೇ ರೀತಿ ಬೀದಿ ನಾಟಕ ಪ್ರದರ್ಶಿಸಿದರು. ಇದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಗಮನಕ್ಕೆ ಬಂದಿದ್ದು, ಅವರಿಬ್ಬರೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಶಿವ-ಪಾರ್ವತಿ ಪಾತ್ರಧಾರಿಗಳಾದ ಬಿರಿಂಚಿ ಬೋರಾ ಹಾಗೂ ಕರೀಶ್ಮಾ ವಿರುದ್ಧ ನಾಗೋನ್ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಶಿವ ಪಾತ್ರಧಾರಿ ಬೋರಾನನ್ನು ಬಂಧಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ